ಡಿವಿಜಿ ಸುದ್ದಿ, ಮಂಡ್ಯ: ನಮಗೆ ಸ್ವಾಭಿಮಾನ ಶಕ್ತಿಯ ಉಸಿರು ನೀಡದ್ದು ಹಸಿರು ಶಾಲು ತೊಟ್ಟವರು. ಕಾಂಗ್ರೆಸ್‍ಗೆ ರೈತರೆ ಜೀವಾಳ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಇಂದು ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ರೈತ ಸಮಾವೇಶದಲ್ಲಿ ಮಾತನಾಡಿದ ಅವರು, ಇದು ದೊಡ್ಡ ಸಮಾವೇಶ ಅಲ್ಲ. ಇಲ್ಲಿ ಕೊಡುವ ಸಂದೇಶ ಮುಖ್ಯ. ಸಂಬಳ, ಪ್ರಮೋಷನ್, ಲಂಚ, ನಿವೃತ್ತಿ ಇಲ್ಲದ ರೈತನನ್ನು ಕಾಪಾಡಬೇಕು. ಇಡೀ ವಿಶ್ವದಲ್ಲೇ ರೈತನಿಗೆ ಯಾವುದೇ ಜಾತಿ ಇಲ್ಲ ಎಂದರು.
ಇಡೀ ದೇಶದಲ್ಲೇ ನಮ್ಮ ಸಂಸ್ಕೃತಿ ಪರಂಪರೆ ಉಳಿಸಿಕೊಂಡು ಬಂದವರು ಅನ್ನದಾತರು. ನಮ್ಮ ಹಳ್ಳಿ ಸೊಗಡು, ಸಂಸ್ಕೃತಿಯನ್ನು ಕಾಪಾಡುತ್ತಿರುವವರು ಇದೇ ಮಣ್ಣಿನ ಮಕ್ಕಳು. ಯಾವ ಕಾರ್ಖಾನೆ, ವ್ಯಾಪಾರ ನಿಂತರೂ ಕೂಡ ಅನ್ನ ನೀರು ಕೊಟ್ಟು ಜೀವ ಉಳಿಸುವ ಅನ್ನದಾತರ ಕೆಲಸ ನಿಲ್ಲಲಿಲ್ಲ. ರೈತರ ಸ್ಮರಿಸಲು ಈ ಸಮಾವೇಶ ಮಾಡುತ್ತಿದ್ದೇವೆ ಎಂದರು.
ನಾನು ಕೂಡ ಕೃಷಿ ಕುಟುಂಬ ಹಿನ್ನೆಲೆಯಿಂದ ಬಂದವನು. ನಮ್ಮ ಶಾಲು ಕಾಂಗ್ರೆಸ್ ಪಕ್ಷದ ಶಾಲಲ್ಲ. ಸೂರ್ಯನಿಗೂ ಭೂಮಿಗೂ ಇರುವ ಸಂಬಂಧವನ್ನು ಉಳಿಸಿಕೊಂಡು ಬರುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದರು.



