Connect with us

Dvgsuddi Kannada | online news portal | Kannada news online

ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ;  ಇಬ್ಬರ ಬಂಧನ

ಕ್ರೈಂ ಸುದ್ದಿ

ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ;  ಇಬ್ಬರ ಬಂಧನ

ಡಿವಿಜಿ ಸುದ್ದಿ, ಮಂಗಳೂರು: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ  ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಟೆಂಪೋ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಇಂದು ಬೆಳಗ್ಗಿನ ಜಾವ ಹಾಲಿನ ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಆಗುತ್ತಿದೆ ಎಂದು ಮಾಹಿತಿ ತಿಳಿದ ಬಜರಂಗದಳದ ಕಾರ್ಯಕರ್ತರು ಕಾಯುತ್ತಿದ್ದರು. ಈ ವೇಳೆ ಹಾಲಿನ ವಾಹನ ಆಗಮಿಸಿದ್ದು ಕಾರ್ಯಕರ್ತರು ಟೆಂಪೋವನ್ನು ಬೆನ್ನಟ್ಟಿಕೊಂಡು ಬಂದಿದ್ದಾರೆ.

ಟೆಂಪೋ ನಗರದ ವೆನ್ಲಾಕ್ ಆಸ್ಪತ್ರೆ ಬಳಿ ಅಂಗಡಿಗೆ ಹಾಲು ಹಾಕಲು ನಿಲ್ಲಿಸಿದಾಗ ಹಿಂಬಾಲಿಸಿಕೊಂಡು ಬಂದಿದ್ದ ಕಾರ್ಯಕರ್ತರು ಟೆಂಪೋವನ್ನು ಅಡ್ಡಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಬಂದರು ಠಾಣಾ ಪೊಲೀಸರು ಗೋಮಾಂಸ ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂದರು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

Advertisement

ದಾವಣಗೆರೆ

Advertisement
To Top