ಡಿವಿಜಿ ಸುದ್ದಿ, ಬೆಳಗಾವಿ: ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ದೊಡ್ಡದಿದ್ದು, ಮೊನ್ನೆ ಪತ್ತೆಯಾಗಿರುವುದು ಕೇವಲ ಸ್ಯಾಂಪಲ್ ಅಷ್ಟೇ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಡ್ರಗ್ಸ್ ಗೆ ಅಮಾಯಕರು ಬಲಿಯಾಗುತ್ತಿದ್ದಾರೆ. ಶಾಲಾ-ಕಾಲೇಜು ಹಾಳಾಗುತ್ತಿದ್ದಾರೆ. ಹೀಗಾಗಿ ಪೊಲೀಸ್ ಮತ್ತು ಅಬಕಾರಿ ಇಲಾಖೆ ಜೊತೆಯಾಗಿ ಕಾರ್ಯಾಚರಣೆ ಮಾಡಿ ಡ್ರಗ್ಸ್ ಅಡ್ಡೆಗಳ ಮೇಲೆ ದಾಳಿ ಮಾಡುವ ಮುನ್ಸೂಚನೆ ನೀಡಲಾಗಿದೆ.ಅದು ಬಹಳ ದುಬಾರಿ ಇರುವುದರಿಂದ ದುಡ್ಡು ಇದ್ದವರು ಜಾಲದ ಬಲೆಗೆ ಬೀಳುತ್ತಿದ್ದಾರೆ ಎಂದರು.
ಬೆಂಗಳೂರಿನಲ್ಲಿ1.30 ಕೋಟಿ ಜನಸಂಖ್ಯೆ ಇದೆ. ಯಾವ ಅಪಾರ್ಟ್‌ಮೆಂಟ್‌ನಲ್ಲಿ ಏನಾಗುತ್ತದೆ ಎನ್ನುವುದು ಗೊತ್ತಾಗುವುದಿಲ್ಲ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.
ಶಾಲಾ– ಕಾಲೇಜುಗಳ ಕಾಂಪೌಂಡ್‌ಗಳ ಹಿಂದೆ ದಂಧೆ ನಡೆಯುತ್ತದೆ ಎಂದು ಗೊತ್ತಾಗಿದೆ. ಅದರ ಬಗ್ಗೆಯೂ ನಿಗಾ ವಹಿಸಲಾಗುವುದು. ಇನ್ನು ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯಲು ಮುಂದಿನ ತಿಂಗಳಿಂದ ಅನುಮತಿ ದೊರೆಯುವ ಸಾಧ್ಯತೆ ಇದೆ ಎಂದರು.



