ಬೆಳಗಾವಿ : ರಾಜ್ಯದಲ್ಲಿ ಅರ್ಹ ಬಿಪಿಎಲ್ ಕಾರ್ಡ್ ದಾರರು ಯಾರು, ಅನರ್ಹ ಬಿಪಿಎಲ್ ಕಾರ್ಡ್ ದಾರರು ಯಾರು ಎನ್ನುವ ಬಗ್ಗೆ ಸರ್ವೆ ಕಾರ್ಯ ನಡೆಯುತ್ತಿದ್ದು, ಅನರ್ಹ ಕಾರ್ಡ್ ಗಳನ್ನು ಮಾರ್ಚ್ 31ರೊಳಗೆ ರದ್ದು ಪಡಿಸಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ಹೇಳಿದರು.ನ
ಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಅನರ್ಹ ಬಿಪಿಎಲ್ ಪಡಿತರ ಚೀಟಿ ಪತ್ತೆ ಮಾಡಿ, ಅನಧಿಕೃತ ಪಡಿತರ ಚೀಟಿ ರದ್ದು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಈ ಬಗ್ಗೆ ತಹಶೀಲ್ದಾರ್, ಪಿಡಿಒ, ಗ್ರಾಪಂ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿ ಪ್ರತಿಗ್ರಾಮಗಳಲ್ಲಿ ಸರ್ವೆ ಮಾಡಿಸಲಾಗುವುದು. ಅನಧಿಕೃತ ಕಾರ್ಡ್ ಪತ್ತೆ ಹಚ್ಚಲಾಗುವುದು. ಮಾರ್ಚ್ 31ರೊಳಗೆ ಅನಧಿಕೃತ ಪಡಿತರ ಚೀಟಿದಾರರ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಬಳಿಕವೇ ಅನಧಿಕೃತ ಕಾರ್ಡ್‍ಗಳನ್ನು ರದ್ದುಪಡಿಸಲಾಗುವುದು ಎಂದರು.
ಬಿಪಿಎಲ್ ಕಾರ್ಡ್ ಪಡೆಯಲು ಅದರದೇ ಆದ ಮಾನದಂಡಗಳಿವೆ. ಮಾನದಂಡ ಉಲ್ಲಂಘಿಸಿ ಕಾರ್ಡ್ ಪಡೆದಿದ್ದರೆ, ಅವರ ಕಾರ್ಡ್‌ಗಳನ್ನು ರದ್ದು ಮಾಡಲಾಗುವುದು. ಅರ್ಹ ಫಲಾನುಭವಿಗಳಿಗೆ ಮಾತ್ರವೇ ಬಿಪಿಎಲ್ ಕಾರ್ಡ್ ಸಿಗಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು.



