ಬೆಂಗಳೂರು: ವಿಜಯಪುರ ಜಿಲ್ಲೆ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ(85) ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಡರಾತ್ರಿ ಒಂದು ಗಂಟೆಗೆ ವಿಧಿವಶರಾಗಿದ್ದಾರೆ.
ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಅವರು ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಸೆಪ್ಟಂಬರ್ 29, 1937 ರಂದು ಜನಿಸಿದ ಅವರು 1994 ರಲ್ಲಿ ಮೊದಲ ಬಾರಿಗೆ ಜನತಾದಳದಿಂದ ಶಾಸಕರಾಗಿದ್ದರು. 7 ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ತೀವ್ರ ಉಸಿರಾಟದ ತೊಂದರೆಯಿಂದ ಕೆಲವು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮನಗೂಳಿ ಅವರು ಪತ್ನಿ ಓರ್ವ ಪುತ್ರಿ ನಾಲ್ವರು ಪುತ್ರರು ಸೇರಿ ಅಪಾರ ಬಂಧು ಬಳಗ ಅಗಲಿದ್ದಾರೆ.



