Connect with us

Dvgsuddi Kannada | online news portal | Kannada news online

ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಸಾವು ಆತ್ಮಹತ್ಯೆಯಲ್ಲ; ರಾಜಕರಣದ ಕೊಲೆ: ಕುಮಾರಸ್ವಾಮಿ

ರಾಜಕೀಯ

ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಸಾವು ಆತ್ಮಹತ್ಯೆಯಲ್ಲ; ರಾಜಕರಣದ ಕೊಲೆ: ಕುಮಾರಸ್ವಾಮಿ

ಬೆಂಗಳೂರು: ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಸಾವು ಆತ್ಯಹತ್ಯೆಯಲ್ಲ, ರಾಜಕಾರಣದ ಕೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇವತ್ತಿನ ಕಲುಷಿತ, ತತ್ವ ರಹಿತ, ಸ್ವಾರ್ಥ ರಾಜಕಾರಣಕ್ಕೆ ನಡೆದ ಬಲಿಯಾಗಿದೆ. ಸಭಾಪತಿ ಸ್ಥಾನಕ್ಕಾಗಿ ಜೆಡಿಎಸ್ ನ ಜಾತ್ಯತೀತತೆ ಪರೀಕ್ಷೆ ಮಾಡಲಾಯಿತು. ಆದರೆ, ಈ ಪರೀಕ್ಷೆಯಲ್ಲಿ ಧರ್ಮೇಗೌಡ ಎಂಬ ಹೃದಯವಂತನ ಬಲಿಯಾಗಿದೆ. ಪರೀಕ್ಷೆ ಮಾಡಿದವರಿಗೆ ಇದೀಗ ಉತ್ತರ ಸಿಕ್ಕಿರಬಹುದು. ಫಲಿತಾಂಶದಿಂದಲಾದರೂ ಅವರ ಆತ್ಮಾವಲೋಕನವಾಗಲಿ. ನನ್ನ ಜೀವನದ ಅತ್ಯಂತ ಮರೆಯಲಾಗದ ದುರಂತ ದಿನ ಎಂದು ಕಣ್ಣೀರಿಟ್ಟರು.

ಧರ್ಮೇಗೌಡ ಅವರ ಸಾವಿನ ಬಗ್ಗೆ ಸತ್ಯಾಂಶ ಹೊರಬರಲು ತನಿಖೆಯಾಗಬೇಕು. ಅಕಾಲಿಕ ಸಾವಿಗೆ ತುತ್ತಾಗುತ್ತಾರೆ ಎಂಬು ಊಹೆ ಕೂಡ ಮಾಡಿರಲಿಲ್ಲ. ಘಟನೆಗೆ ಕಾರಣಕರ್ತರಾರು ಎಂಬ ಸತ್ಯಾಂಶ ಹೊರಬರಬೇಕು. ಇಂದಿನ ರಾಜಕಾರಣದಲ್ಲಿ ನಿಜವಾದ ಧರ್ಮರಾಯರಾಗಿದ್ದರು. ಸರಳ, ಸಜ್ಜನ, ಪ್ರಾಮಾಣಿಕರಾಗಿದ್ದರು. ಈ ಘಟನೆಯಿಂದ ಸಾರ್ವಜನಿಕ ಜೀವನದಲ್ಲಿರುವ ಪ್ರತಿಯೊಬ್ಬರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ರಾಜಕೀಯ ಇರುತ್ತೆ, ಹೋಗುತ್ತೆ. ಇಂತಹ ಅನಾಹುತ ಮರುಕಳಿಸದಂತೆ ಎಲ್ಲಾ ರಾಜಕಾರಣಿಗಳೂ ನೋಡಿಕೊಳ್ಳಬೇಕು.

ಮೇಲ್ಮನೆಯಲ್ಲಿ ನಡೆದ ಘಟನೆ ಬಳಿದ ಧರ್ಮೇಗೌಡ ಅವರು ಅತ್ಯಂತ ಮಾನಸಿಕ ಖಿನ್ನತೆಗೊಳಗಾಗಿದ್ದರು. ಧರ್ಮೇಗೌಡ ಅವರು ಕೆಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಅವರ ಸಹೋದರ ಬೋಜೇಗೌಡ ಅವರು 10 ದಿನಗಳ ಹಿಂದೆಯೇ ನನಗೆ ಹೇಳಿದ್ದರು. ಈ ವೇಳೆ ನಾನು ಧರ್ಮೇಗೌಡ ಅವರೊಂದಿಗೆ ಸುಮಾರು 30 ನಿಮಿಷಗಳ ಕಾಲ ಮಾತನಾಡಿ, ಇದರಲ್ಲಿ ನಿಮ್ಮ ತಪ್ಪೇನು ಇಲ್ಲಾ ಎಂದು ಹೇಳಿದ್ದೆ.

ರಾಜ್ಯದ ಸಂಪತ್ತು ಲೂಟಿ ಮಾಡಿದವರು ಧೈರ್ಯವಾಗಿ ಬದುಕುತ್ತಾರೆ. ಇಂತಹ ಸೂಕ್ಷ್ಮ ಜೀವಿಗಳೂ ಇರುತ್ತಾರೆ. ಪ್ರಜಾಪ್ರಭುತ್ವದ ಹೆಸರಿನಲ್ಲಿ ಹುಡುಗಾಟಿಕೆ ಆಡುವುದು ಬೇಡ. ಬಹುಮತ ಇಲ್ಲದ ಮೇಲೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದರೆ ಏನಾಗುತ್ತಿತ್ತು? ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರನ್ನು ಪರೀಕ್ಷೆ ಮಾಡಬೇಕಿತ್ತೆ? ಯಾವುದೇ ಒತ್ತಡಕ್ಕೆ ಮಣಿಯುವುದು ಬೇಡ ಎಂದು ನಾನು ಮತ್ತು ದೇವೇಗೌಡರು ಸಲಹೆ ಮಾಡಿದ್ದೆವು ಎಂದು ತಿಳಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement

ದಾವಣಗೆರೆ

Advertisement
To Top