Connect with us

Dvgsuddi Kannada | online news portal | Kannada news online

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಬಂಡಾಯದಿಂದ ಹಿಂದೆ ಸರಿಯಲ್ಲ; ಹಾಲನೂರು ಎಸ್. ಲೇಪಾಕ್ಷ

ದಾವಣಗೆರೆ

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಬಂಡಾಯದಿಂದ ಹಿಂದೆ ಸರಿಯಲ್ಲ; ಹಾಲನೂರು ಎಸ್. ಲೇಪಾಕ್ಷ

ಡಿವಿಜಿ ಸುದ್ದಿ, ದಾವಣಗೆರೆ:  ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ಧೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಹಾಲನೂರು ಎಸ್ ಲೇಪಾಕ್ಷ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡರು ಹಾಗೂ ರಾಜ್ಯಾಧ್ಯಕ್ಷರ ಮನವಿ ಮೇರೆಗೆ ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂಬ ಸುದ್ದಿ ಹರಿದಾಡುತ್ತಿದೆ.  ಆದರೆ,
ಯಾವುದೇ ಕಾರಣಕ್ಕೂ  ಸಹ ಹಿಂಪಡೆಯುವುದಿಲ್ಲ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರೂ ಸರಿ ವಾಪಾಸ್ ಆಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. 2005-06 ರಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಹಲವಾರು ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಸಾರ್ವಜನಿಕ ಸೇವೆಯಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದೇನೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಆಗಲಿ ಅಥವಾ ಮುಖ್ಯಮಂತ್ರಿ ಯಡಿಯೂರಪ್ಪನವರಾಗಲಿ ವಾಪಸ್ ತೆಗೆದುಕೊಳ್ಳುವಂತೆ ಮಾತನಾಡಿಲ್ಲ. ಸ್ವಜಾತಿ ಪ್ರೇಮ ತೋರಿಸುವ ಮೂಲಕ ಸದಾನಂದ ಗೌಡ ಹಾಗೂ ನಾರಾಯಣಸ್ವಾಮಿ ಅವರು ನನಗೆ ಟಿಕೆಟ್ ತಪ್ಪುವ ಹಾಗೆ ಮುಖ್ಯಮಂತ್ರಿಗಳಿಗೆ ಒತ್ತಡ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ವಾಪಸ್ ತೆಗೆದುಕೊಳ್ಳುವುದಿಲ್ಲ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿ ಉಳಿಯುವೆ. ಪ್ರಜ್ಞಾವಂತ ಮತದಾರರು ನನಗೆ ಬೆಂಬಲಿಸಲಿದ್ಧರೆ, ಈ ಬಾರಿ ನನ್ನ ಗೆಲುವು ಖಚಿತ ಎಂದರು.

ನಾನು ಈಗಾಗಲೇ 5ಜಿಲ್ಲೆಗಳಲ್ಲಿ ಪ್ರವಾಸ ಮಾಡಿದೆನೆ ಶಿಕ್ಷಕರು, ಪದವೀಧರರು ನನ್ನ ಮೇಲೆ ವಿಶ್ವಾಸವಿಟ್ಟು ನನ್ನ ಪರವಾಗಿ ಕೆಲಸ ಮಾಡುವ ಮೂಲಕ ನನಗೆ ಮತ ಚಲಾಯಿಸಲಿದ್ದಾರೆ. ನಾನು ಹತ್ತು ಸಾವಿರಕ್ಕೂ ಹೆಚ್ಚು ಹೊಸ ನೋಂದಣಿಗಳನ್ನು ಮಾಡಿಸಿದ್ದೇನೆ. ಚುನಾವಣೆಯಲ್ಲಿ ಗೆದ್ದರೂ ಸರಿ ಸೋತರೂ ಸರಿ ಬಿಜೆಪಿ ಪಕ್ಷ ಬಿಡುವುದಿಲ್ಲ ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಎಚ್. ಸಿದ್ಧಪ್ಪ ಅಶೋಕ್ ಮತ್ತು ನಂದೀಶ್ ಉಪಸ್ಥಿತರಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top
(adsbygoogle = window.adsbygoogle || []).push({});