ಡಿವಿಜಿ ಸುದ್ದಿ, ಬೆಂಗಳೂರು: ಶಿರಾ ಹಾಗೂ ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವು ಸಾಧಿಸಿದೆ. ಮತ್ತೊಂದೆಡೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಸತತ ನಾಲ್ಕನೆ ಬಾರಿ ಗೆಲುವು ಸಾಧಿಸಿದ್ದಾರೆ.
ಇಂದು ಶಿರಾ ಹಾಗೂ ಆರ್ ಆರ್ ನಗರ ಉಪ ಚುನಾವಣೆಯ ಮತ ಎಣಿಕೆ ಜೊತೆಗೆ ವಿಧಾನಪರಿಷತ್ ಸ್ಥಾನಗಳಿಗೆ ನಡೆದಂತ ಚುನಾವಣೆಯ ಮತ ಎಣಿಕೆ ಕೂಡ ನಡೆಯಿತು. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿ ಬಿಜೆಪಿಯ ಅಭ್ಯರ್ಥಿ ಪುಟ್ಟಣ್ಣ ಅವರು ಗೆಲುವು ದಾಖಲಿಸಿದರು.
2200 ಮತಗಳ ಅಂತರದಿಂದ ಪುಟ್ಟಣ್ಣ ಗೆಲುವು ಸಾಧಿಸಿದ್ದು, ಈ ಹಿಂದೆ ಮೂರು ಬಾರಿ ಪುಟ್ಟಣ್ಣ ಜೆಡಿಎಸ್ ನಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದರು. ಇದೀಗ ನಾಲ್ಕನೇ ಬಾರಿ ಬಿಜೆಪಿಯಿಂದ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಪುಟ್ಟಣ್ಣ ಸ್ಪರ್ಧಿಸಿದ್ದರು. ಈ ಕುರಿತು ಚುನಾವಣಾ ಆಯೋಗ ಅಧಿಕೃತ ಘೋಷಣೆ ಬಾಕಿ ಇದೆ.



