ಡಿವಿಜಿ ಸುದ್ದಿ, ಬೆಂಗಳೂರು : ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಮತಏಣಿಕೆ ನಿನ್ನೆ ಪ್ರಾರಂಭವಾಗಿ ಇಂದು ಕೂಡ ಮುಂದುವರೆದಿದ್ದು, ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಚಿದಾನಂದ ಗೌಡ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಒಟ್ಟು 14 ಟೇಬಲ್ ಗಳಲ್ಲಿ ನಡೆದ ಮತ ಎಣಿಕೆಯಲ್ಲಿ ಚಿದಾನಂದ ಗೌಡ 24, 217 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಅವರನ್ನು ಸೋಲಿಸಿದ್ದಾರೆ. ಈ ಮೂಲಕ ಆಗ್ನೇಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡ ಭರ್ಜರಿ ಗೆಲುವು ಸಾಧಿಸಿದ್ದು, ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತವಾಗಿ ಘೋಷಿಸಬೇಕಿದೆ.
ಆಗ್ನೇಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡ ಗೆಲುವು ಸಾಧಿಸಿದ್ದಾರೆ. ಒಟ್ಟು 14 ಟೇಬಲ್ ಗಳಲ್ಲಿ ನಡೆದ ಮತ ಎಣಿಕೆಯಲ್ಲಿ ಚಿದಾನಂದಗೌಡ 24 ಸಾವಿರದ 217 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಅವರನ್ನು ಸೋಲಿಸಿದ್ದಾರೆ. pic.twitter.com/7tUWUxgQKf
— DD Chandana News (@DDChandanaNews) November 11, 2020



