ಬೆಳಗಾವಿ: ಜಿಲ್ಲೆಯ ರಾಯಭಾಗ ತಾಲ್ಲೂಕಿನ ಹಾರೂಗೇರಿ ಬಳಿ ಇಂದು ಮಾಜಿ ಡಿಸಿಎಂ ಹಾಗೂ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಸವದಿ ಸೇರಿ ಕಾರಿನಲ್ಲಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಅಪಘಾತವಾದ ತಕ್ಷಣ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ದೊಡ್ಡ ಪ್ರಮಾಣದ ಅಪಾಯ ತಪ್ಪಿದಂತಾಗಿದೆ.
ಗೋಕಾಕನಿಂದ ಅಥಣಿ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಹಾರೂಗೇರಿ ಕ್ರಾಸ್ ಬಳಿ ಬೈಕೊಂದು ಏಕಾಏಕಿ ಕಾರಿಗೆ ಅಡ್ಡಬಂದಿದ್ದು, ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಹೋಗಿ ಕಾರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಕಾರು ಚಾಲಕ ಹಾಗೂ ಪಕ್ಕದಲ್ಲಿ ಕುಳಿತಿದ್ದ ಲಕ್ಷ್ಮಣ ಸವದಿ ಅವರ ತಲೆ, ಕೈಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಿಂಬದಿ ಸೀಟಿನಲ್ಲಿದ್ದ ಗನ್ ಮ್ಯಾನ್ ಹಾಗೂ ಇನ್ನೊಬ್ಬರಿಗೆ ಸ್ವಲ್ಪ ಪ್ರಮಾಣದಲ್ಲಿ ಗಾಯಗಳಾಗಿವೆ. ಸವದಿ ಅವರನ್ನು ಅಥಣಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು.



