ಬೆಂಗಳೂರು: ವಿಧಾನಪರಿಷತ್ ಉಪಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ ಸಿ ಕೊಂಡಯ್ಯ ಕಣಕ್ಕೆ ಇಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಹಿರಿಯ ಮುಖಂಡ, ವಿಧಾನ ಪರಿಷತ್ ಸದಸ್ಯ ಕೆ ಸಿ ಕೊಂಡಯ್ಯ ಅವರನ್ನು ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆಯಲ್ಲಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಚುನಾವಣೆಯಲ್ಲಿ ಸೋಲು ಗೆಲುವು ಸಹಜ, ಆದರೆ ಸ್ಪರ್ಧೆ ಮುಖ್ಯ, ನಾವು ಸ್ಪರ್ಧೆ ಮಾಡುತ್ತೇವೆ. ಸಭಾಪತಿ ಆಯ್ಕೆ ವಿಚಾರದ ಬಗ್ಗೆ ನಂತರ ತೀರ್ಮಾನಿಸುತ್ತೇವೆ ಎಂದು ಹೇಳಿದರು. ಸಲಹಾ ಸಮಿತಿ ಸಭೆಗಳನ್ನು ಬಹಿಷ್ಕರಿಸಲು ತೀರ್ಮಾನಿಸಲಾಗಿದ..ಕಳೆದ ಬಾರಿಯ ಅಧಿವೇಶನದ ಸಂದರ್ಭದಲ್ಲಿ ಸಲಹಾ ಸಮಿತಿ ಸಭೆಗಳಲ್ಲಿ ತೆಗೆದುಕೊಂಡ ತೀರ್ಮಾನಕ್ಕೆ ವಿರುದ್ದವಾಗಿ ಸ್ಪೀಕರ್ ಹಾಗೂ ಸರ್ಕಾರ ನಡೆದುಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿದೆ.



