ದಾವಣಗೆರೆ: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿಗೆ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತ
ಪೂರ್ವ ವಿಜ್ಞಾನ ವಸತಿ ಕಾಲೇಜುಗಳು ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪಿಸಿಎಂಬಿ ಮತ್ತು ಪಿಸಿಎಂಸಿ ಸಂಯೋಜನೆಗಳೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಈ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಮೂಲಭೂತ ಸೌಲಭ್ಯಗಳನ್ನು ನೀಡಲಾಗುವುದು.
ಮೀಸಲಾತಿ ಆಧಾರದ ಮೇಲೆ ಆಯ್ಕೆ
2024-2025ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ತರಗತಿಗಳಲ್ಲಿ ವ್ಯಾಸಂಗ ಮಾಡಿರುವ ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಆಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ ಯಾವುದೇ ಶಾಲೆಯ ವಿದ್ಯಾರ್ಥಿಗಳು ಮತ್ತು ಈ ಹಿಂದೆ ಪಾಸು ಮಾಡಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ತರಗತಿ ದಾಖಾಲಾತಿಗೆ ಅರ್ಜಿ ಸಲ್ಲಿಸಬಹುದು. ಎಸ್.ಎಸ್.ಎಲ್.ಸಿ ಅಂಕಗಳ ಮತ್ತು ಮೀಸಲಾತಿ ಆಧಾರದ ಮೇಲೆ ಅರ್ಹತಾ ಪಟ್ಟಿ ತಯಾರಿಸಿ ಪ್ರವೇಶ ನೀಡಲಾಗುವುದು.
ಮೇ.17 ಕೊನೆ ದಿನ
ಮೊರಾರ್ಜಿ ದೇಸಾಯಿ ವಸತಿಯುತ ಶಾಲೆ & ವಿಜ್ಞಾನ ಪದವಿ ಪೂರ್ವ ಕಾಲೇಜು ಕಾರಿಗನೂರು, (ಪ್ರಜಾ-91) ಚನ್ನಗಿರಿ ತಾ, ದಾವಣಗೆರೆ, ಮೊರಾರ್ಜಿ ದೇಸಾಯಿ ವಸತಿಯುತ ವಿಜ್ಞಾನ ಪದವಿ ಪೂರ್ವ ಕಾಲೇಜು ಆವರಗೊಳ್ಳ, (ಪ.ಜಾ-) ತಾಃ ದಾವಣಗೆರೆ ಇಲ್ಲಿ www.kreis.kar.nic.in ಆನ್ ಲೈನ್ ಮೂಲಕ ಅರ್ಜಿಯನ್ನು ಪಡೆದು ಮೇ.17 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.



