Connect with us

Dvgsuddi Kannada | online news portal | Kannada news online

ಮುರುಘಾ ಮಠ ನೀಡಿದ್ದ ಬಸವಶ್ರೀ ಪ್ರಶಸ್ತಿ ಹಿಂದಿರುಗಿಸಲು ಪಿ.ಸಾಯಿನಾಥ್ ನಿರ್ಧಾರ

ಪ್ರಮುಖ ಸುದ್ದಿ

ಮುರುಘಾ ಮಠ ನೀಡಿದ್ದ ಬಸವಶ್ರೀ ಪ್ರಶಸ್ತಿ ಹಿಂದಿರುಗಿಸಲು ಪಿ.ಸಾಯಿನಾಥ್ ನಿರ್ಧಾರ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಮಠದ ಶ್ರೀ, ಪ್ರದಾನ ಮಾಡಿದ್ದ ಬಸವಶ್ರೀ ಪ್ರಶಸ್ತಿಯನ್ನು ಪತ್ರಕರ್ತ ಪಿ.ಸಾಯಿನಾಥ್ ಅವರು ಹಿಂದಿರುಗಿಸಲು ತೀರ್ಮಾನಿಸಿದ್ದಾರೆ.

ಪ್ರಕರಣದಲ್ಲಿ ಡಾ.ಶಿವಮೂರ್ತಿ ಸ್ವಾಮೀಜಿ ಅವರು ಬಂಧಿತರಾದ ಹಿನ್ನೆಲೆ ಪ್ರಶಸ್ತಿ ಹಿಂದಿರುಗುಸಲು ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಸಾಯಿನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುರುಘಾ ಮಠದಿಂದ ಪ್ರತಿವರ್ಷ ಬಸವಶ್ರೀ ಪ್ರಶಸ್ತಿ ನೀಡಲಾಗುತ್ತಿದೆ. 2017ರಲ್ಲಿ ಸಾಯಿನಾಥ್ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಪ್ರಶಸ್ತಿಯೊಂದಿಗೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗಿತ್ತು. ಪೋಕ್ಸೋ ಕಾಯ್ದೆಯಡಿ ಶ್ರೀ ಬಂಧಿತರಾಗಿರುವ ಹಿನ್ನೆಲೆ ಅವರಿಂದ ಪಡೆದ ಬಸವಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಲು ತೀರ್ಮಾನಿಸಿದ್ದಾರೆ. ಮುರುಘಾ ಮಠ ನೀಡಿದ್ದ 5 ಲಕ್ಷ ರೂಪಾಯಿ ನಗದು ಕೂಡ ವಾಪಸ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಬಸವಣ್ಣನ ಹೆಸರಿನಲ್ಲಿ 1997ರಿಂದ ಮುರುಘಾ ಮಠ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ಅಣ್ಣಾ ಹಜಾರೆ, ಮೇಧಾ ಪಾಟ್ಕರ್, ಸ್ವಾಮಿ ಅಗ್ನಿವೇಶ್, ಕಿರಣ್ ಬೇಡಿ, ಶಬಾನಾ ಆಜ್ಮಿ, ದಲೈಲಾಮಾ, ಬಲ್ಲಾದೀರ್ ಗದ್ದರ್, ಪಿ.ಟಿ ಉಷಾ ಅವರಿಗೆ ಬಸವಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top