ಚಿತ್ರದುರ್ಗ: ಮುರುಘಾ ಮಠದ ಆಡಳಿತವನ್ನು ಸರ್ಕಾರವೇ ವಹಿಸಿಕೊಂಡು ನೂತನ ಪೀಠಾಧ್ಯಕ್ಷರನ್ನು ನೇಮಕ ಮಾಡುವಂತೆ ಮಾಜಿ ಸಚಿವ ಹೆಚ್.ಏಕಾಂತಯ್ಯ ಅವರ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ ಮಾಡಿದ ಹಿನ್ನಲೆ ಚಿತ್ರದುರ್ಗ ಜಿಲ್ಲಾಡಳಿತಕ್ಕೆ ವರದಿ ನೀಡುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ನವೆಂಬರ್ 10 ರಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು 75 ಪುಟಗಳ ವರದಿ ನೀಡಿದ್ದಾರೆ. ಕೂಡಲೇ ವರದಿ ತರಿಸಿಕೊಂಡು ಪರಿಶೀಲನೆ ಮಾಡಿ ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸರಸ್ವತಿ ಕಾನೂನು ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನಾ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶ್ರೀಗಳು ಅಪ್ರಪ್ತಾ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜಿಲ್ಲಾಡಳಿತ ನೀಡಿರುವ ವರದಿಯನ್ನು ಪರಿಶೀಲಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಈ ಪ್ರಕರಣ ಇದೀಗ ನ್ಯಾಯಾಲಯದಲ್ಲಿ ಇದ್ದು, ಈ ಸಂಬಂಧ ಪೊಲೀಸರು ಕೆಲವರನ್ನು ಬಂಧಿಸಿದ್ದು, ತನಿಖೆಯಲ್ಲಿ ಎಲ್ಲವೂ ಬಯಲಾಗಲಿದೆ ಎಂದರು. ಜೆಡಿಎಸ್ ಪಕ್ಷಕ್ಕೆ ಬಹುಮತ ಬಂದರೆ ಅಲ್ಪಸಂಖ್ಯಾತರನ್ನು ಮುಖ್ಯಮಂತ್ರಿ ಆಗಿ ಮಾಡಲಿದ್ದೇವೆ ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರಕ್ರಿಯಿಸಿ, ಅದು ಅವರ ಪಕ್ಷದ ನಿಲುವು ಈ ಬಗ್ಗೆ ನಾನು ಏನನ್ನು ಹೇಳುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಸಾರಿಗೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ, ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ, ಜಿ.ಪಂ.ಸಿಇಓ ದಿವಾಕರ್ ಸೇರಿದಂತೆ ಇತರರು ಹಾಜರಿದ್ದರು.



