ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಕ್ಷೇತ್ರದಲ್ಲಿ ದಾವಣಗೆರೆ ದಕ್ಷಿಣ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬ 12 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪಾರ್ವತಮ್ಮ- ಶಾಮನೂರು ಶಿವಶಂಕರಪ್ಪ ಅತಿಥಿ ಗೃಹವನ್ನು ಕೇಂದ್ರ ಸಚಿವ ಅಮಿತ್ ಶಾ ಇಂದು(ಫೆ.11) ಉದ್ಘಾಟಿಸಿದರು.
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಪ್ರತಾಪ ಸಿಂಹ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರಿದ್ದರು.