Connect with us

Dvgsuddi Kannada | online news portal | Kannada news online

ಮೈಸೂರು ಮೇಯರ್ ಚುನಾವಣೆ; ಮುರಿದು ಬಿದ್ದ ಕಾಂಗ್ರೆಸ್- ಜೆಡಿಎಸ್ ಮೈತ್ರಿ; ಮೂರು ಪಕ್ಷದಿಂದ ಸ್ವತಂತ್ರ ಸ್ಪರ್ಧೆ

ಜಿಲ್ಲಾ ಸುದ್ದಿ

ಮೈಸೂರು ಮೇಯರ್ ಚುನಾವಣೆ; ಮುರಿದು ಬಿದ್ದ ಕಾಂಗ್ರೆಸ್- ಜೆಡಿಎಸ್ ಮೈತ್ರಿ; ಮೂರು ಪಕ್ಷದಿಂದ ಸ್ವತಂತ್ರ ಸ್ಪರ್ಧೆ

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮುರಿದು ಬಿದ್ದಿದೆ. ಮೂರು ಪಕ್ಷಗಳು  ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಜೊತೆಗಿನ ಜೆಡಿಎಸ್ ಮೈತ್ರಿ ಕಡಿತವಾಗಲು  ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ಲಘುವಾಗಿ ಮಾತನಾಡಿದ್ದಾರೆ. ಪದೇ ಪದೇ ನಮ್ಮ ಪಕ್ಷವನ್ನು ಕೆಣಕುವ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಎಂಬುದು ಈಗ ಎಲ್ಲಿದೆ? ಜೆಡಿಎಸ್ ಒಂದು ಪಕ್ಷವೇ ಅಲ್ಲ ಎಂದೆಲ್ಲ ಹೇಳುತ್ತಿದ್ದಾರೆ. ಹಾಗಾಗಿ ಜೆಡಿಎಸ್ ಶಕ್ತಿಯನ್ನು ತೋರಿಸುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ಈ ಮೂಲಕ ಸಿದ್ದರಾಮಯ್ಯನವರಿಗೆ ಮನವರಿಕೆ ಮಾಡಿಕೊಡಬೇಕಿದೆ ಎಂದರು.

ಸಿದ್ದರಾಮಯ್ಯನವರು ಡಿ.ಕೆ.ಶಿವಕುಮಾರ್ ಗೂ ನನ್ನ ಜೊತೆ ಮಾತನಾಡಲು ಬಿಡುತ್ತಿಲ್ಲ. ನನ್ನೊಂದಿಗೆ ಮಾತನಾಡದಂತೆ ಒತ್ತಡ ಹೇರುತ್ತಿದ್ದಾರೆ. ನಾವು ಇಲ್ಲಿ ಯಾರಿಗೂ ಸವಾಲು ಹಾಕಲು ಬಂದಿಲ್ಲ. ಕಿಂಗ್ ಮೇಕರ್ ಆಗಲೂ ಬಯಸುತ್ತಿಲ್ಲ. ನಮ್ಮದೇನಿದ್ದರೂ 2023ರ ಚುನಾವಣೆ ಮೇಲೆ ಗುರಿ ಎಂದು ಹೇಳಿದರು.

ಇನ್ನು ಬಿಜೆಪಿಯಿಂದಲೂ ನಾವು ಅಂತರ ಕಾಯ್ದುಕೊಳ್ಳುತ್ತಿದ್ದೇವೆ. ರಾಜ್ಯವನ್ನು ಬಿಜೆಪಿ ಲಘುವಾಗಿ ಪರಿಗಣಿಸುತ್ತಿದೆ. ಅಧಿಕಾರ ಸಿಗದಿದ್ದರೂ ತೊಂದರೆಯಿಲ್ಲ. ಅಂತರ ಕಾಯ್ದುಕೊಳ್ಳುವುದು ಮುಖ್ಯ ಎಂದರು.

ಒಟ್ಟು 73 ಪಾಲಿಕೆ ಸದಸ್ಯರಿದ್ದು, ಇದರಲ್ಲಿ ಬಿಜೆಪಿ 25 ಸ್ಥಾನ, ಕಾಂಗ್ರೆಸ್ 20 ಹಾಗೂ ಜೆಡಿಎಸ್  22 ಸ್ಥಾನ ಗೆದ್ದಿದೆ. ಮೈಸೂರು ಪಾಲಿಕೆ ಅಧಿಕಾರ ಹಿಡಿಯಲು ಮ್ಯಾಜಿಕ್ ನಂಬರ್ 37 ಆಗಿದೆ. ಒಟ್ನಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು ಮೇಯರ್ ಇನ್ನಷ್ಟೇ ತಿಳಿಯಬೇಕಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top