Connect with us

Dvgsuddi Kannada | online news portal | Kannada news online

ನಾಳೆ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆ

ಪ್ರಮುಖ ಸುದ್ದಿ

ನಾಳೆ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆ

ನವದೆಹಲಿ: ಪ್ರಧಾನಿಯಾಗಿ ಮೋದಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ನಾಳೆ (ಜೂನ್ 18) ಮೊದಲ ಬಾರಿಗೆ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಲಿದ್ದು, ಇದೇ ಸಂದರ್ಭದಲ್ಲಿ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ 20 ಸಾವಿರ ಕೋಟಿ ರೂ ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಹಿಂದಿನ ಎರಡು ಅವಧಿಯಲ್ಲಿಯೂ ಮೋದಿ ಕೃಷಿ ಕ್ಷೇತ್ರಕ್ಕೆ ಆದ್ಯತೆ ನೀಡಿದ್ದರು.ರೈತರ ಹಿತದೃಷ್ಟಿಯಿಂದ ಹಲವು ಪ್ರಮುಖ ಯೋಜನೆ ಅನುಷ್ಠಾನಗೊಳಿಸಿದ್ದಾರೆ. ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ಪಿಎಂ ಕಿಸಾನ್ ಹಣ ಬಿಡುಗಡೆಗೆ ಮೊದಲ ಸಹಿ ಹಾಕಿದ್ದೆ ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ದೇಶದ 9.26 ಕೋಟಿ ರೈತರ ಖಾತೆಗೆ ಜೂನ್ 18ರಂದು ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top