ನವದೆಹಲಿ: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಕೇಂದ್ರ ಸರ್ಕಾರ ಮೇ .04ರಿಂದ ನಡೆಯಬೇಕಿದ್ದ ಸಿಬಿಎಸ್ 12ನೇ ತರಗತಿ ತರಗತಿ ಪರೀಕ್ಷೆಯನ್ನು ಮುಂದೂಡಿದ್ದು, 10 ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗಿನ ಸಭೆಯ ಬಳಿಕ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಈ ನಿರ್ಧಾರ ಕೈಗೊಂಡಿದ್ದಾರೆ. ಮೇ.04ರಿಂದ ಆರಂಭವಾಗಬೇಕಿದ್ದ 12ನೇ ಪರೀಕ್ಷೆಯನ್ನು ಜೂನ್ 01ರವರೆಗೆ ಮುಂದೂಡಲಾಗಿದೆ. ಪರಿಸ್ಥಿತಿ ನೋಡಿಕೊಂಡು ಪರೀಕ್ಷೆ ನಡೆಸುವ ಬಗ್ಗೆನಿರ್ಧಾರ ಕೈಗೊಳ್ಳುತ್ತೇವೆ. ಇನ್ನು 10 ನೇ ತರಗತಿ ಪರೀಕ್ಷೆ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ವಿದ್ಯಾರ್ಥಿಗಳ ಕಾರ್ಯ ಶೈಲಿ, ಪ್ರತಿಭೆ ಮೇಲೆ ಅಂಕ ನೀಡಲು ನಿರ್ಧಾರ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
.



