ಗ್ವಾಲಿಯರ್: ಆಟೋಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 12 ಮಹಿಳೆಯರು ಹಾಗೂ ಒಬ್ಬ ಪುರುಷ ಸೇರಿದಂತೆ 13 ಮೃತಪಟ್ಟಿರುವ ಧಾರುಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಪ್ರಯಾಣಿಕರಿಂದ ತುಂಬಿದ್ದ ಆಟೋಗೆ ಗ್ವಾಲಿಯರ್‍ನ ಓಲ್ಡ್ ಚಾವ್ನಿ ಪ್ರದೇಶದಲ್ಲಿ ಇಂದು ಮುಂಜಾನೆ 7 ಗಂಟೆ ಸುಮಾರಿಗೆ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೃತಪಟ್ಟ ಮಹಿಳೆಯರು ಅಂಗನವಾಡಿ ಕೇಂದ್ರಗಳಲ್ಲಿ ಅಡುಗೆ ತಯಾರಿಕೆ ಕಾರ್ಯ ನಿರ್ವಹಿಸುತ್ತಿದ್ದರು. ಚಲಿಸುತ್ತಿದ್ದ ಾಟೋ ಮೇಲೆ ಜವರಾಯನಾಗಿ ಎರಗಿದ ಬಸ್ ಚಾಲಕ ಸೇರಿದಂತೆ ಎಂಟು ಮಂದಿಯನ್ನು ಸ್ಥಳದಲ್ಲೇ ಬಲಿ ತೆಗೆದುಕೊಂಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಉಳಿದವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.