ಬಾರಬಂಕಿ: ಬಸ್ ಮತ್ತು ಟ್ರಕ್ ಡಿಕ್ಕಿಯಾದ ಹಿನ್ನೆಲೆ ಸ್ಥಳದಲ್ಲಿಯೇ 9 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಾರಬಂಕಿಯಲ್ಲಿ ನಡೆದಿದೆ. ಅಪಘಾತದಲ್ಲಿ 27 ಮಂದಿ ಗಾಯಗೊಂಡಿದ್ದಾರೆ. ದೇವಾ ಪೊಲೀಸ್ ಠಾಣೆ ಸಮೀಪದ ಕಿಸಾನ್ ಪಥ್ ಬಬುರಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ಧಾರೆ. ಗಂಭೀರವಾಗಿ ಗಾಯಗೊಂಡರವನ್ನು ತುರ್ತು ಚಿಕಿತ್ಸಾ ವಿಭಾಗದಲ್ಲಿ ದಾಖಲಿಸಲಾಗಿದೆ. ದೆಹಲಿಯಿಂದ ಉತ್ತರ ಪ್ರದೇಶದ ಬಹ್ರಿಚ್ಗೆ ಪ್ರಯಾಣಿಸುತ್ತಿದ್ದ ಬಸ್ ಮರಳು ಲಾರಿಗೆ ಡಿಕ್ಕಿ ಹೊಡೆದಿದ್ದರಿಂ ಈ ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಹಾಗೂ ಗಾಯಾಳುಗಳಿಗೆ ಚಿಕಿತ್ಸೆಗೆ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ತಿಳಿಸಿದ್ದಾರೆ.