Connect with us

Dvgsuddi Kannada | online news portal | Kannada news online

ಅಗ್ನಿವೀರ್ ವಾಯು ಸೇನೆಯ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

IMG 20240122 203532

ದಾವಣಗೆರೆ

ಅಗ್ನಿವೀರ್ ವಾಯು ಸೇನೆಯ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಸೇನೆಯ ನೇಮಕಾತಿಗಾಗಿ ಅವಿವಾಹಿತ ಯುವಕ, ಯುವತಿಯರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ದ್ವಿತೀಯ ಪಿ.ಯು.ಸಿ. (ವಿಜ್ಞಾನ, ವಾಣಿಜ್ಯ ಮತ್ತು ಕಲೆ ವಿಷಯಗಳಲ್ಲಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ.50, ಮತ್ತು ಇಂಗ್ಲೀಷ್‍ನಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಬೇಕು. 2 ಜನವರಿ 2004 ರಿಂದ 02 ಜುಲೈ 2007 ರ ನಡುವೆ (ಎರಡು ದಿನಾಂಕಗಳನ್ನು ಒಳಗೊಂಡಂತೆ) ಜನಿಸಿದವರಾಗಿರಬೇಕು. ಅರ್ಜಿ ಸಲ್ಲಿಸಲು ಫೆ.6 ಕೊನೆಯ ದಿನವಾಗಿರುತ್ತದೆ.

ಆಸಕ್ತರು https://agnipathvayu.cdac.in ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ದೂ.ಸಂ: 08192-259446 ಸಂಪರ್ಕಿಸಲು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ರವೀಂದ್ರ.ಡಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top