ದಾವಣಗೆರೆ; ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ 2023-24 ನೇ ಸಾಲಿಗಾಗಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಧೈರ್ಯ, ಸಾಹಸ ಮಾಡಿರುವ ಮತ್ತು ಪ್ರಾಣದ ಹಂಗು ತೊರೆದು ಜೀವ ರಕ್ಷಣೆ ಮಾಡಿರುವ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ, ಮಾಹಿತಿ ತಂತ್ರಜ್ಞಾನ, ಪರಿಸರ, ಕಲೆ ಮತ್ತು ಸಂಸ್ಕøತಿ ವಿಷಯಗಳಲ್ಲಿ ವಿಶಿಷ್ಟ ಸಾಧನೆ ಮಾಡಿರುವ, ಅಸಾಧಾರಣ ಪ್ರತಿಭೆಯನ್ನು ಹೊಂದಿರುವ 18 ವರ್ಷದೊಳಗಿನ ಮಕ್ಕಳು ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು https://awards.gov.in ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ನವದೆಹಲಿ ಇವರ ಅಧಿಕೃತ ವೆಬ್‍ಸೈಟ್ WWW.wcd.nic.in ನಲ್ಲಿ ಆನ್‍ಲೈನ್ ಮುಖಾಂತರ ಆಗಸ್ಟ್ 31 ರೊಳಗೆ ಸಲ್ಲಿಸಬಹುದು.



