Connect with us

Dvgsuddi Kannada | online news portal | Kannada news online

ಮಾ. 15, 16ರಂದು ಅಖಿಲ ಭಾರತ ಬ್ಯಾಂಕ್ ಮುಷ್ಕರ

ರಾಜ್ಯ ಸುದ್ದಿ

ಮಾ. 15, 16ರಂದು ಅಖಿಲ ಭಾರತ ಬ್ಯಾಂಕ್ ಮುಷ್ಕರ

ಬೆಂಗಳೂರು:  ಕೇಂದ್ರ ಸರ್ಕಾರವು ಐಡಿಬಿಐ ಬ್ಯಾಂಕ್ ಮತ್ತು 2 ಸಾರ್ವಜನಿಕ ವಲಯದ ಬ್ಯಾಂಕ್‍ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ ಮಾರ್ಚ್ 15 ಮತ್ತು 16ರಂದು ಎರಡು ದಿನಗಳ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ.

ಮುಷ್ಕರದಲ್ಲಿ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯ ಅಂಗ ಸಂಘಟನೆಗಳಾದ ಎಐಬಿಇಎ, ಎಐಬಿಓಸಿ, ಎನ್‍ಸಿಬಿಇ, ಎಐಬಿಓಎ ಸೇರಿದಂತೆ ಗ್ರಾಮೀಣ ಬ್ಯಾಂಕ್ ಸಂಘಟನೆಗಳಿಗೆ ಸೇರಿದ ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಹಾಗೂ ಅಕಾರಿಗಳು ದೇಶದಾದ್ಯಂತ ಈ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ.

ಮುಷ್ಕರದ ಅಂಗವಾಗಿ ದಾವಣಗೆರೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಳಿ ಮತಪ್ರದರ್ಶನದ ಮೂಲಕ ಪ್ರತಿಭಟನೆ, ನಂತರ ಕೆನರಾ ಬ್ಯಾಂಕ್ ಮುಂಭಾಗ ಪ್ರತಿಭಟನೆ ನಡೆಯಲಿದೆ. ಮುಷ್ಕರ ಸಂಬಂಧ  ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯ ಎಲ್ಲಾ ಸದಸ್ಯರು, ಗ್ರಾಮೀಣ ಬ್ಯಾಂಕ್ ಉದ್ಯೋಗಿ ಸಂಘಟನೆಗಳ ಸದಸ್ಯರು, ನಿವೃತ್ತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟದ ಸದಸ್ಯರು, ಪಿಗ್ಮಿ ಸಂಗ್ರಹಕಾರರು, ಸಾರ್ವಜನಿಕರು, ಸಂಘ-ಸಂಸ್ಥೆಗಳು ಭಾಗವಹಿಸಿ, ಸರ್ಕಾರದ ಬ್ಯಾಂಕ್ ಖಾಸಗೀಕರಣ ನಡೆಯನ್ನು ಹಿಮ್ಮೆಟ್ಟಿಸಬೇಕಾಗಿ ಜಿಲ್ಲಾ ಸಂಚಾಲಕರಾದ ಕೆ.ಎನ್.ಗಿರಿರಾಜ್‍ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top