ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಂದ್ರೂ ರಾಜಕೀಯ ಚಟುವಟಿಕೆಗಳು ಮಾತ್ರ ಇನ್ನು ಮುಂದುವರಿದಿದೆ. ಮಹಾಘಟಬಂಧನದ ನಾಯಕ ಆರ್ ಜೆಡಿಯ ತೇಜಸ್ವಿ ಯಾದವ್, ಗೆದ್ದ ತಮ್ಮ ಎಲ್ಲ ನಾಯಕರಿಗೆ ಸಂದೇಶ ರವಾನಿಸಿದ್ದಾರೆ. ಮುಂದಿನ ಒಂದು ತಿಂಗಳು ಯಾರು ಪಾಟ್ನಾ ನಗರದಿಂದ ಹೊರ ಹೋಗಬೇಡಿ. ಕಾರಣ ನಾವೇ ಸರ್ಕಾರ ರಚಿಸುತ್ತೇವೆ ಎಂದಿದ್ದಾರೆ ಅಂತ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಪಾಟ್ನಾದಲ್ಲಿರುವ ಮಾಜಿ ಸಿಎಂ, ಆರ್‍ಜೆಡಿ ನಾಯಕಿ ರಾಬ್ಡಿ ದೇವಿಯವರ ನಿವಾಸದಲ್ಲಿ ಮಹಾಘಟಬಂಧನದ ಎಲ್ಲ ಮುಖಂಡರು ಸೇರಿ ಆತ್ಮಾವಲೋಕನ ಸಭೆ ನಡೆಸಿದರು. ಈ ವೇಳೆ ತೇಜಸ್ವಿ ಯಾದವ್ ತಾವೇ ಸರ್ಕಾರ ರಚಿಸೋದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಬಿಹಾರದಲ್ಲಿ ಸರ್ಕಾರ ರಚನೆ ಮಾಡ್ತಾರಂತೆ ತೇಜಸ್ವಿ ಯಾದವ್..!!
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment