ಪಟ್ನಾ: ಅಕ್ರಮವಾಗಿ ಬಾಂಬ್ ತಯಾರಿಸಲು ಇಟ್ಟಿದ್ದ ಸ್ಪೋಟಕ ಸಿಡಿದು ಭಾರೀ ದೊಡ್ಡ ಅನಾಹುತ ಸಂಭವಿಸಿದ್ದು, 11 ಮಂದಿ ಸಾವನ್ನಪ್ಪಿದ ಘಟನೆ ಬಿಹಾರದ ಬಾಗಲ್ಪುರ್ ಜಿಲ್ಲೆಯಲ್ಲಿ ಮನೆಯೊಂದರಲ್ಲಿ ನಡೆದಿದೆ.
ನಿನ್ನೆ ರಾತ್ರಿ ತಾತಾರ್ಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಜ್ವಾಲಿ ಚಾಕ್ ಎಂಬಲ್ಲಿ ದುರ್ಘಟನೆ ನಡೆದಿದೆ. ಸ್ಪೋಟ 15 ಕಿಮೀ ದೂರ ವ್ಯಾಪಿಸಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸಾವು ಹೆಚ್ಚಾಗುವ ಸಾಧ್ಯತೆ ಇದೆ. ಬಾಗಲ್ಪುರ್ ವಲಯದ ಡಿಜಿಪಿ ಹಾಗೂ ಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಕ್ರಮವಾಗಿ ನಾಡ ಬಾಂಬ್ ತಯಾರಿಸಲು ಇಟ್ಟಿದ್ದ ಸಲಕರಣೆಗಳು ಸ್ಫೋಟಿಸಿವೆ. ಗಾಯಾಳುಗಳನ್ನು ಮಾಯಾಗಂಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಪೋಟ ನಡೆದ ಸ್ಥಳದ ಅವಶೇಷಗಳಡಿ ಹಲವರು ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ನಡೆದಿದೆ.