Connect with us

Dvgsuddi Kannada | online news portal | Kannada news online

ಕೇಂದ್ರ ಬಜೆಟ್; ಮೂರು ವರ್ಷದಲ್ಲಿ ದೇಶಾದ್ಯಂತ  ಏಕಲವ್ಯ ಮಾದರಿ ಶಾಲೆ; 38 ಸಾವಿರ ಶಿಕ್ಷಕರ ನೇಮಕ

ಪ್ರಮುಖ ಸುದ್ದಿ

ಕೇಂದ್ರ ಬಜೆಟ್; ಮೂರು ವರ್ಷದಲ್ಲಿ ದೇಶಾದ್ಯಂತ  ಏಕಲವ್ಯ ಮಾದರಿ ಶಾಲೆ; 38 ಸಾವಿರ ಶಿಕ್ಷಕರ ನೇಮಕ

ನವದೆಹಲಿ: ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ, ಗಿರಿಜನ ವಸತಿ ಶಾಲೆಗಳ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ, ಮುಂದಿನ 3 ವರ್ಷಗಳಲ್ಲಿ ದೇಶಾದ್ಯಂತ ಗಿರಿಜನ ಪ್ರದೇಶಗಳಲ್ಲಿ ಏಕಲವ್ಯ ಮಾದರಿ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. ಏಕಲವ್ಯ ಮಾದರಿ ಶಾಲೆಗಳಿಗಾಗಿ 38,800 ಶಿಕ್ಷಕರು ಹಾಗೂ 740 ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಘೋಷಿಸಿದರು. ಇದರಿಂದ 3.5 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top