Connect with us

Dvgsuddi Kannada | online news portal | Kannada news online

ಆದಾಯ ತೆರಿಗೆ, ಕೇಂದ್ರ ಅಬಕಾರಿ, ಸಿಬಿಐ ಇನ್‍ಸ್ಪೆಕ್ಟರ್, ಇಡಿ ಸೇರಿ ಸಿಬ್ಬಂದಿ ನೇಮಕಾತಿ ಆಯೋಗ ನಡೆಸುವ ವಿವಿಧ ಹುದ್ದೆಗಳ ಪರೀಕ್ಷೆಗೆ ಅರ್ಜಿ ಆಹ್ವಾನ

images 40

ಪ್ರಮುಖ ಸುದ್ದಿ

ಆದಾಯ ತೆರಿಗೆ, ಕೇಂದ್ರ ಅಬಕಾರಿ, ಸಿಬಿಐ ಇನ್‍ಸ್ಪೆಕ್ಟರ್, ಇಡಿ ಸೇರಿ ಸಿಬ್ಬಂದಿ ನೇಮಕಾತಿ ಆಯೋಗ ನಡೆಸುವ ವಿವಿಧ ಹುದ್ದೆಗಳ ಪರೀಕ್ಷೆಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಸಹಾಯಕ ಸೆಕ್ಷನ್ ಆಫೀಸರ್, ಲೆಕ್ಕ ಪರಿಶೋಧನಾ ಅಧಿಕಾರಿ, ಲೆಕ್ಕ ಪತ್ರ ಅಧಿಕಾರಿ, ಆದಾಯ ತೆರಿಗೆ, ಕೇಂದ್ರ ಅಬಕಾರಿ ಮತ್ತು ಸಿಬಿಐಯಲ್ಲಿ ಇನ್‍ಸ್ಪೆಕ್ಟರ್, ಇಡಿ ನಲ್ಲಿ ಎಇಓ ಮತ್ತು ಸಿಬಿಐ, ಸಿಬಿಎನ್ ನಲ್ಲಿ ಸಬ್‍ಇನ್‍ಸ್ಪೆಕ್ಟರ್, ಅಂಚೆ ಇಲಾಖೆಯಲ್ಲಿ ಇನ್‍ಸ್ಪೆಕ್ಟರ್, ಹಿರಿಯ ಸೆಕ್ರೆಟರಿಯೇಟ್ ಸಹಾಯಕ, ಅಪ್ಪರ್ ಡಿವಿಜನ್ ಗುಮಾಸ್ತ, ಅಂಚೆ ಇಲಾಖೆ ಸಹಾಯಕ, ವಿಂಗಡನೆ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ವೆಬೆಸೈಟ್ https://ssc.gov.in or www.ssckkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 24 ಕೊನೆಯದಿನವಾಗಿರುತ್ತದೆ. 18 ರಿಂದ 27 ವರ್ಷ ವಯೋಮಾನದವರಾಗಿರಬೇಕು.

ಎಸ್ಸಿ,ಎಸ್ಟಿ,ಒ.ಬಿ.ಸಿ,ಇ.ಎಸ್.ಎಮ್ ಅಭ್ಯರ್ಥಿಗಳಿಗೆ ನಿಯಾಮಾನುಸಾರ ಇತರ ವಯೋಮಿತಿ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ : 08192259446 ಇಲ್ಲಿಗೆ ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ.ತಿಳಿಸಿದ್ದಾರೆ.

Continue Reading
Advertisement
You may also like...

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top