Connect with us

Dvgsuddi Kannada | online news portal | Kannada news online

ದೇಶದಲ್ಲಿ ಕಾಂಗ್ರೆಸ್ ಪರ್ಯಾಯ ರಾಜಕೀಯ ಪಕ್ಷವಾಗಿ ಉಳಿದಿಲ್ಲ: ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್

ರಾಷ್ಟ್ರ ಸುದ್ದಿ

ದೇಶದಲ್ಲಿ ಕಾಂಗ್ರೆಸ್ ಪರ್ಯಾಯ ರಾಜಕೀಯ ಪಕ್ಷವಾಗಿ ಉಳಿದಿಲ್ಲ: ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್

ನವದೆಹಲಿದೇಶದಲ್ಲಿ ಕಾಂಗ್ರೆಸ್ ಪರಿಣಾಮಕಾರಿ- ಪರ್ಯಾಯ ಆಡಳಿತ ನೀಡಬಲ್ಲ ಪಕ್ಷವಾಗಿ ಉಳಿದಿಲ್ಲ.  ಬಿಹಾರದ ಜನರಷ್ಟೇ ಅಲ್ಲ, ದೇಶದ ಜನರೂ ಸಹ ಪರ್ಯಾಯ ಪಕ್ಷ ಎಂದು ಒಪ್ಪಿಕೊಳ್ಳಲು ಸಿದ್ದರಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಆತ್ಮಾವಲೋಕನ ಮುಕ್ತಯವಾಗಿದೆ.  ದೇಶದಲ್ಲಿ  ಕಾಂಗ್ರೆಸ್ ಪರ್ಯಾಯ ಪಕ್ಷವನ್ನಾಗಿ ಜನ ಪರಿಗಣಿಸುವ ಯೋಗ್ಯತೆಯನ್ನು ಪಕ್ಷ ಉಳಿಸಿಕೊಂಡಿಲ್ಲ ಎಂಬ ಅವರ ಹೇಳಿಕೆ ಕಾಂಗ್ರೆಸ್ ಮತ್ತು ದೇಶ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಕಾಂಗ್ರೆಸ್ ಪಕ್ಷದಲ್ಲಿ ಸಾಲು ಸಾಲು ಸೋಲಿನಿಂದ ಕಂಗೆಟ್ಟಿದೆ. ಅದರಲ್ಲೂ ಬಿಹಾರ ಚುನಾವಣೆಯಲ್ಲಿ ತೀರ ಕಳಪೆ ಸಾಧನೆ ಮಾಡಿದೆ.  ಪಕ್ಷದೊಳಗೆ ನಾಯಕತ್ವದ ವಿಚಾರದಲ್ಲಿ ಮತ್ತೊಂದು ಸುತ್ತಿನ ಅಸಮಾಧಾನ, ಭಿನ್ನಮತ ಭುಗಿಲೇಳುವ ಲಕ್ಷಣಗಳು ಗೋಚರಿಸಿವೆ. ಪರಿಣಾಮಕಾರಿ ಪರ್ಯಾಯ ಆಡಳಿತ ನೀಡಬಲ್ಲ ಪಕ್ಷ ಕಾಂಗ್ರೆಸ್ ಎಂಬುದನ್ನು ಬಿಹಾರದ ಜನರಷ್ಟೇ ಅಲ್ಲ, ದೇಶದ ಜನರೂ ಒಪ್ಪಿಕೊಳ್ಳುತ್ತಿಲ್ಲ. ಎಲ್ಲೆಲ್ಲಿ ಉಪಚುನಾವಣೆಗಳು ನಡೆದಿವೆಯೋ ಅಲ್ಲೆಲ್ಲ ಕಾಂಗ್ರೆಸ್ ಸೋಲು ಅನುಭವಿಸಿದೆ ಎಂದಿದ್ದಾರೆ.

ಬಿಹಾರದ ಫಲಿತಾಂಶ ನೋಡಿ ಅಲ್ಲಿ ಪರ್ಯಾಯವಾಗಿ ಜನರಿಗೆ ಕಾಣಿಸಿದ್ದು ಆರ್ ಜೆಡಿ ಹೊರತು ಕಾಂಗ್ರೆಸ್ ಪಕ್ಷವಲ್ಲ. ಗುಜರಾತ್ ನೋಡಿ ಅಲ್ಲಿ ಉಪಚುನಾವಣೆಯಲ್ಲಿ ಗೆಲ್ಲಲಾಗಿಲ್ಲ. ಲೋಕಸಭಾ ಉಪ ಚುನಾವಣೆಯಲ್ಲಿ ಒಂದೇ ಒಂದು ಸೀಟೂ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಆತ್ಮಾವಲೋಕನ ಮಾಡಲಿದೆ ಎಂಬ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ತಾರೀಕ್ ಅನ್ವರ್ ಅವರ ಸಲಹೆಯನ್ನು ಉಲ್ಲೇಖಿಸಿದ ಸಿಬಲ್, ಕಳೆದ ಆರು ವರ್ಷಗಳಲ್ಲಿ ಕಾಂಗ್ರೆಸ್ ಆತ್ಮಾವಲೋಕ ಮಾಡಿಲ್ಲ ಎಂದಾದರೆ, ಈಗ ಆತ್ಮಾವಲೋಕನ ಮಾಡುವುದರಿಂದ ಆಗಬಹುದಾದ ಪ್ರಯೋಜನದ ಬಗ್ಗೆ ಯಾವ ಭರವಸೆ ಇಟ್ಟುಕೊಳ್ಳಬಹುದು ಎಂದೂ ಸಿಬಲ್ ಪ್ರಶ್ನಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top
(adsbygoogle = window.adsbygoogle || []).push({});