Connect with us

Dvgsuddi Kannada | online news portal | Kannada news online

ಭಾರತದ ಕೊರೊನಾ ಪರಿಸ್ಥಿತಿಗೆ ಮಿಡಿದ ಗೂಗಲ್ ಸಿಇಒ ಸುಂದರ್ ಪಿಚೈ;  135 ಕೋಟಿ ಅನುದಾನ ಘೋಷಣೆ

ಅಂತರಾಷ್ಟ್ರೀಯ ಸುದ್ದಿ

ಭಾರತದ ಕೊರೊನಾ ಪರಿಸ್ಥಿತಿಗೆ ಮಿಡಿದ ಗೂಗಲ್ ಸಿಇಒ ಸುಂದರ್ ಪಿಚೈ;  135 ಕೋಟಿ ಅನುದಾನ ಘೋಷಣೆ

ವಾಷಿಂಗ್ಟನ್, ಭಾರತದಲ್ಲಿನ ಕೋವಿಡ್-19 ಸಾಂಕ್ರಾಮಿಕದ ಪರಿಸ್ಥಿತಿ ನೋಡಿ ಮನಸ್ಸು ಛಿದ್ರವಾಗಿದೆ. ಗೂಗಲ್ ಈ ಕೂಡಲೇ ಭಾರತಕ್ಕೆ ವೈದ್ಯಕೀಯ ಸರಬರಾಜು, ಹೆಚ್ಚಿನ ಅಪಾಯದಲ್ಲಿರುವ ಸಮುದಾಯಗಳನ್ನು ಬೆಂಬಲಿಸುವ ಉದ್ದೇಶದಿಂದ ಮತ್ತು ನಿರ್ಣಾಯಕ ಮಾಹಿತಿಯನ್ನು ಹರಡಲು ಸಹಾಯ ಮಾಡುವ ಉದ್ದೇಶದಿಂದ 135 ಕೋಟಿ ರೂ ಅನುದಾನ ನೀಡಲಿದೆ ಎಂದು  ಗೂಗಲ್ ಸಿಇಒ ಭಾರತ ಮೂಲದ ಸುಂದರ್ ಪಿಚೈ ಟ್ವೀಟ್ ಮಾಡಿದ್ದಾರೆ.

 ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗಿರುವ ಭಾರತದಲ್ಲಿನ ಪರಿಸ್ಥಿತಿ ಕುರಿತು ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ ಟ್ವೀಟ್ ಮಾಡಿದ ಬೆನ್ನಲ್ಲೇ ಅವರೂ ಕೂಡ ಟ್ವೀಟ್ ಮಾಡಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

‘ಭಾರತದ ಪ್ರಸ್ತುತ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ. ಈ ಸಂಕಷ್ಟದ ಪರಿಸ್ಥಿಯಿಲ್ಲಿ ಅಮೆರಿಕ ಸರ್ಕಾರವು ಭಾರತಕ್ಕೆ ನೆರವು ನೀಡಲು ಮುಂದಾಗಿದೆ. ಇದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ. ಅಂತೆಯೇ ಮೈಕ್ರೋಸಾಫ್ಟ್ ಸಂಸ್ಥೆ ತನ್ನ ಧ್ವನಿ, ಸಂಪನ್ಮೂಲ, ಮತ್ತು ತಂತ್ರಜ್ಞಾನವನ್ನು ಭಾರತದಲ್ಲಿನ ಪ್ರಸ್ತುತ ಪರಿಸ್ಥಿತಿಯಲ್ಲಿ ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ಮತ್ತು ನಿರ್ಣಾಯಕ ಆಮ್ಲಜನಕ ಸಾಂದ್ರತೆಯ ಸಾಧನಗಳ ಖರೀದಿಯನ್ನು ಬೆಂಬಲಿಸಲು ಬಳಸುವುದನ್ನು ಮುಂದುವರಿಸುತ್ತದೆ ಎಂದು ಭರವಸೆ ನೀಡಿದ್ದರು.

ದೇಶಾದ್ಯಂತ ಚಿಕಿತ್ಸೆಗಾಗಿ ಸೋಂಕಿತರು ಪರದಾಡುತ್ತಿದ್ದು, ಆಸ್ಪತ್ರೆಗಳ ಬೆಡ್ ಗಳು ಸಂಪೂರ್ಣ ಭರ್ತಿಯಾಗಿದ್ದು, ಬೆಡ್ ಗಳಿಲ್ಲದೆ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡುತ್ತಿದ್ದಾರೆ. ಅಂತೆಯೇ ಇತ್ತ ಅಸ್ಪತ್ರೆಗೆ ದಾಖಲಾದ ಸೋಂಕಿತರೂ ಕೂಡ ಆಕ್ಸಿಜನ್ ಕೊರತೆಯಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದು, ಸಾಕಷ್ಟು ರೋಗಿಗಳು ಆಕ್ಸಿಜನ್ ಇಲ್ಲದೆ ಸಾವನ್ನಪ್ಪುತ್ತಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಅಂತರಾಷ್ಟ್ರೀಯ ಸುದ್ದಿ

To Top