ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇದುವರೆಗೆ ಒಟ್ಟು ಸೋಂಕಿತ ಪ್ರಕರಣಗಳ 69 ಲಕ್ಷ ಗಡಿದಾಟಿದೆ. ಇದರಲ್ಲಿ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಸಂಖ್ಯೆ 59 ಲಕ್ಷಕ್ಕೂ ಅಧಿಕವಾಗಿದೆ.
ಒಂದೇ ದಿನದಲ್ಲಿ 70,496 ಮಂದಿಗೆ ಕೊರೊನಾ ಸೋಂಕು ದೃಢವಾಗಿದ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 69,06,152ಕ್ಕೆ ಏರಿಕೆಯಾಗಿದೆ. ಇನ್ನೂ ಒಂದೇ ದಿನ 964 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಸದ್ಯ ದೇಶದಲ್ಲಿ 8,93,592 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೂ 59,06,070 ಮಂದಿ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆ 1,06,490 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಗುಣಮುಖರಾದವರ ಪ್ರಮಾಣ ಶೇ. 85.25 ತಲುಪಿದೆ. ಈ ಕುರಿತು ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ನಿಮ್ಮೆಲ್ಲರ ಸಹಕಾರದಿಂದ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಎಷ್ಟೋ ಮಂದಿ ಸೋಂಕಿನಿಂದ ಬಚಾವ್ ಆಗಿದ್ದಾರೆ. ಇದೇ ರೀತಿಯಲ್ಲಿ ಕೆಲಸ ಮಾಡಿ. ಇನ್ನಷ್ಟು ಜನರ ಜೀವ ಉಳಿಸಿ ಎಂದು ಕೊರೊನಾ ವಾರಿಯರ್ಸ್ ಗೆ ಮನವಿ ಮಾಡಿದ್ದರು.