Connect with us

Dvgsuddi Kannada | online news portal | Kannada news online

ಭೀಕರ ಕಾರು ಅಪಘಾತದಲ್ಲಿ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ಗಂಭೀರ ಗಾಯ; ಕಾರು ಸಂಪೂರ್ಣ ಸುಟ್ಟು ಭಸ್ಮ

ರಾಷ್ಟ್ರ ಸುದ್ದಿ

ಭೀಕರ ಕಾರು ಅಪಘಾತದಲ್ಲಿ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ಗಂಭೀರ ಗಾಯ; ಕಾರು ಸಂಪೂರ್ಣ ಸುಟ್ಟು ಭಸ್ಮ

ನವದೆಹಲಿ: ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ರೂರ್ಕಿ ಬಳಿ ಅವರ ಕಾರು ಅಪಘಾತವಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಿಷಬ್ ಪಂತ್ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಕಾರ್ ಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದೆ.

ಡಿವೈಡರ್ ಗೆ ಡಿಕ್ಕಿಯಾದ ರಭಸಕ್ಕೆ ಕಾರು ಹೊತ್ತಿ ಉರಿದಿದೆ. ಅಪಘಾತದಲ್ಲಿ ರಿಷಬ್ ಗಂಭೀರವಾಗಿ ಗಾಯಗೊಂಡಿದ್ದಾರೆ. ವೈದ್ಯರ ಪ್ರಕಾರ, ರಿಷಭ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ ಎನ್ನಲಾಗಿದೆ. ಸದ್ಯ ರಿಷಭ್ ಪಂತ್ ಅವರ ಆರೋಗ್ಯ ಸ್ಥಿರವಾಗಿದೆ.

ಕೊತ್ವಾಲಿ ಪ್ರದೇಶದ ಎನ್.ಹೆಚ್. 58ರಲ್ಲಿ ಅವರ ಕಾರ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. 108 ಸಿವಿಲ್ ಆಸ್ಪತ್ರೆಯ ಸಹಾಯದಿಂದ ಪಂತ್ ಅವರನ್ನು ಚಿಕಿತ್ಸೆಗಾಗಿ ರೂರ್ಕಿಗೆ ಕಳುಹಿಸಲಾಯಿತು, ಘಟನೆಯು ಬೆಳಿಗ್ಗೆ 5:15 ಕ್ಕೆ ಸಂಭವಿಸಿದೆ. ಹರಿದ್ವಾರ ಜಿಲ್ಲೆಯ ಮಂಗಳೌರ್ ಮತ್ತು ನರ್ಸನ್ ನಡುವೆ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರೂರ್ಕಿ ಸಿವಿಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಅವರನ್ನು ಡೆಹ್ರಾಡೂನ್ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಎಸ್ಪಿ ದೇಹತ್ ಸ್ವಪನ್ ಕಿಶೋರ್ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top