ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ (commercial cylinder) ಬೆಲೆಯನ್ನು 14.50 ರೂಪಾಯಿಗಳಷ್ಟು ಇಳಿಕೆ ಮಾಡಿವೆ. ಇಂದಿನಿಂದ (ಮೇ 1) ಪರಿಷ್ಕೃತ ದರ ಜಾರಿಗೆ ಬರಲಿದೆ.
ಅಗತ್ಯ ವಸ್ತುಗಳ ದರ ಏರಿಕೆ ನಡುವೆಯೇ ಸಿಲಿಂಡರ್ ಬೆಲೆ ಇಳಿಕೆಯಾಗಿರುವುದು ಗ್ರಾಹಕರಿಗೆ ಸ್ವಲ್ಪ ನಿರಾಳತೆ ಉಂಟುಮಾಡಿದೆ. ದರ ಕಡಿತ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,747.50 ರೂ. ಆಗಿದೆ. ಪರಿಷ್ಕೃತ ಬೆಲೆ ನಂತರ ಮುಂಬೈನಲ್ಲಿ 1,699 ರೂ.ಗಳು, ಕೋಲ್ಕತ್ತಾದಲ್ಲಿ 1,851.50 ರೂ.ಗಳು ಮತ್ತು ಚೆನ್ನೈನಲ್ಲಿ 1,906 ರೂ ಆಗಿದೆ.
ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ದೇಶೀಯ ಮತ್ತು ವಾಣಿಜ್ಯ ಎಲ್‌ಪಿಜಿ ಬೆಲೆಗಳನ್ನು ಸಾಮಾನ್ಯವಾಗಿ ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಿಸಲಾಗುತ್ತದೆ. ಈ ಬದಲಾವಣೆಯು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳಿಗೆ ಮಾತ್ರ ಅನ್ವಯಿಸುತ್ತದೆ ಗೃಹ ಬಳಕೆ ಎಲ್‌ಪಿಜಿ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ವಾಣಿಜ್ಯ ಸಿಲಿಂಡರ್ ಗಳು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಸಣ್ಣ ಉದ್ಯಮಗಳು ಹೆಚ್ಚು ಬಳಕೆಯಾಗುತ್ತಿವೆ.