ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಮಾಸ್ಕ್ ಧರಿಸದೇ ಓಡಾಡೋರಿಗೆ ದೆಹಲಿ ಸರ್ಕಾರ 500 ರೂಪಾಯಿಂದ 2000ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಇಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ರಾಜಧಾನಿಯಲ್ಲಿ ಕೋವಿಡ್-19 ಪರಿಸ್ಥಿತಿ ನಿಭಾಯಿಸುವ ಕುರಿತಂತೆ ಸರ್ವ ಪಕ್ಷಗಳ ಸಭೆ ನಡೆಯಿತು. ಸಭೆಯಲ್ಲಿ ಈ ಮೊದಲಿದ್ದಂತ 500 ದಂಡವನ್ನು 2000ಕ್ಕೆ ಹೆಚ್ಚಳ ಮಾಡುವಂತ ತೀರ್ಮಾನವನ್ನು ಕೈಗೊಳ್ಳಲಾಗಿರುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. ದೆಹಲಿಯಲ್ಲಿ ಮಾಸ್ಕ್ ಧರಿಸದೇ ಓಡಾಡಿದರೆ, 2000 ದಂಡ ಕಟ್ಟಬೇಕಾಗುತ್ತದೆ.



