Connect with us

Dvgsuddi Kannada | online news portal | Kannada news online

ಪೊಲೀಸರ ಭರ್ಜರಿ ಕಾರ್ಯಾಚರಣೆ; 7.9 ಕೋಟಿ ನಕಲಿ ನೋಟು ವಶ, ಅಂತರ ರಾಜ್ಯ ದಂಧೆಕೋರರ ಬಂಧನ

ರಾಷ್ಟ್ರ ಸುದ್ದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ; 7.9 ಕೋಟಿ ನಕಲಿ ನೋಟು ವಶ, ಅಂತರ ರಾಜ್ಯ ದಂಧೆಕೋರರ ಬಂಧನ

ವಿಶಾಖಪಟ್ಟಣಂ: ಅಂತರ ರಾಜ್ಯ ದಂಧೆಕೋರರ ಭರ್ಜರಿ ಕಾರ್ಯಾಚರಣೆ ನಡೆದಿದ್ದು,  7.9 ಕೋಟಿ ರೂ. ಮೌಲ್ಯದ ನಕಲಿ ಹಣ ಹೊಂದಿದ್ದ ಇಬ್ಬರು ಆರೋಪಿಗಳನ್ನು ಆಂಧ್ರ ಪ್ರದೇಶ-ಒಡಿಶಾ ಗಡಿಯ ಸುಂಕಿ ಔಟ್​ಪೋಸ್ಟ್​ನಲ್ಲಿ ಪೊಲೀಸರು ಬಂಧಿಸಿ, ಹಣವನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಅಂತಾರಾಜ್ಯ ದಂಧೆಕೋರರು ಎಂಬುದಾಗಿ ತಿಳಿದುಬಂದಿದ್ದು, ಛತ್ತೀಸ್​ಗಢದ ರಾಯ್ಪುರದಿಂದ ಆಂಧ್ರದ ವಿಶಾಖಪಟ್ಟಣಂ ಬರುವಾಗ ಮಾರ್ಗ ಮಧ್ಯೆಯೇ ಬಂಧಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಸುಂಕಿ ಔಟ್​ಪೋಸ್ಟ್​ನಲ್ಲಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ 500 ರೂ. ನೋಟಿನ ಕಂತೆಗಳ ಒಟ್ಟು 7.9 ಕೋಟಿ ರೂ. ನಕಲಿ ಹಣ ಪತ್ತೆಯಾಗಿದೆ.

ಇನ್ನು ಆಂಧ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಸಹ ಘೋಷಣೆಯಾಗಿದ್ದು, ಮಾರ್ಚ್​ 10ರಂದು ಮತದಾನ ನಡೆಯಲಿದೆ. ಇದರ ಬೆನ್ನಲ್ಲೇ ನಕಲಿ ಹಣ ಪತ್ತೆಯಾಗಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇದೀಗ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) 489ಎ, 489ಬಿ, 489ಸಿ ಮತ್ತು 120ಬಿ ಸೆಕ್ಷನ್​ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆರೋಪಿಗಳು ಪೊಲೀಸ್​ ಕಸ್ಟಡಿಯಲ್ಲಿದ್ದು, ತನಿಖೆ ಆರಂಭವಾಗಿದೆ. ಇದೇ ವೇಳೆ ಆಂಧ್ರ, ಛತ್ತೀಸ್​ಗಢ ಮತ್ತು ಒಡಿಶಾ ಮೂರು ರಾಜ್ಯಗಳ ಪೊಲೀಸರು ತಂಡವೊಂದನ್ನು ರಚಿಸಿ ಗ್ಯಾಂಗ್​ನ ಉಳಿದ ಸದಸ್ಯರಿಗಾಗಿ ಬಲೆ ಬೀಡಲಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});