ನವದೆಹಲಿ: ಕೃಷಿ ಮಸೂದೆ ವಿರೋಧಿಸಿ ರೈತರಿಗಾಗಿ ಮಾತನಾಡಿ ಎಂಬ ಅಭಿಯಾನವನ್ನು ಕಾಂಗ್ರೆಸ್ ಪಕ್ಷ ಸಾಮಾಜಿಕ ಮಾಧ್ಯಮಗಳಲ್ಲಿ ಆರಂಭಿಸಿದೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರನ್ನು ಶೋಷಿಸುತ್ತಿದೆ. ಇದರ ವಿರುದ್ಧ ಜನರು ಮೋದಿ ಸರ್ಕಾರದ ವಿರುದ್ಧ ಒಂದಾಗಿ ಧ್ವನಿಯೆತ್ತಬೇಕಿದೆ ಎಂದು ಟ್ವೀಟ್ ಮಾಡಿದ್ದಾರೆ. ‘
ವಿಡಿಯೋ ಕಳುಹಿಸುವ ಮೂಲಕ ರೈತರಿಗಾಗಿ ಮಾತನಾಡಿ ಅಭಿಯಾನದಲ್ಲಿ ಪಾಲ್ಗೊಳ್ಳಿ. ಕೃಷಿ ಮಸೂದೆ ಹಿಂಪಡೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಗ್ರಹಿಸಿರುವ ವಿಡಿಯೋವನ್ನು ಟ್ಯಾಗ್ ಮಾಡಿದ್ದಾರೆ.
ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳು ಸಂಸತ್ತಿನ ಉಭಯ ಸದನಗಳಲ್ಲಿ ಇತ್ತೀಚೆಗೆ ಅಂಗೀಕಾರ ಪಡೆದಿದ್ದು, ರಾಷ್ಟ್ರಪತಿ ಅವರ ಅಂಕಿತ ಬಾಕಿಯಿದೆ.



