ಚಂಡೀಗಢ: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿರುವ ಕೃಷಿ ಮಸೂದೆ ವಿರೋಧಿಸಿ ದೆಹಲಿ ಚಲೋ ಚಳವಳಿ ಭಾಗವಾಗಿ ಪಂಜಾಬ್ ರೈತರು ಪೊಲೀಸ್ ಬ್ಯಾರಿಕೇಡ್ ಮುರಿದು ಹರಿಯಾಣ ರಾಜ್ಯ ಪ್ರವೇಶಿಸಲು ಮುಂದಾದ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.
ಪಂಜಾಬ್-ಹರಿಯಾಣ ಗಡಿ ಭಾಗದಲ್ಲಿ ರೈತರು ಗುಂಪು ಸೇರಿ ದೆಹಲಿ ಚಲೋ ಆರಂಭಿಸಿ ಪೊಲೀಸ್ ಬ್ಯಾರಿಕೇಡ್ ತೆಗೆದು ನುಗ್ಗಲು ಪ್ರಯತ್ನಿಸುತ್ತಿದ್ದರು. ಆಗ ಹರಿಯಾಣ ಪೊಲೀಸರು ಧ್ವನಿವರ್ಧಕ ಮೂಲಕ ಪ್ರತಿಭಟನಾಕಾರರಿಗೆ ಎಚ್ಚರಿಸುತ್ತಿದ್ದರು. ಈ ವೇಳೆ ಹರಿಯಾಣ-ಪಂಜಾಬ್ ಅಂತರಾಜ್ಯ ಗಡಿಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.
ಪ್ರತಿಭಟನಾಕಾರರು ದೆಹಲಿಗೆ ತೆರಳದಂತೆ ಹರಿಯಾಣ ಪೊಲೀಸರು ಹಲವು ಹಂತಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿದ್ದರು.ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಜನರು ಶಾಂತಿಯುತವಾಗಿ ಪ್ರತಿಭಟನೆ ಮಾಡುವುದನ್ನು ಕಾನೂನಿನ ಮೂಲಕ ಹತ್ತಿಕ್ಕುವಂತಿಲ್ಲ. ನಾವು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದೆವು. ಆದರೆ ನಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರು ತಡೆಯುತ್ತಿದ್ದಾರೆ ಎಂದರು.
#WATCH | Security personnel use fire tear gas shells to disperse a crowd of farmers gathered at the Shambhu border between Haryana and Punjab, to protest the farm laws pic.twitter.com/11NfwLcEQZ
— ANI (@ANI) November 26, 2020
#WATCH Farmers' protest continues at Shambhu border, near Ambala (Haryana) as police stop them from proceeding to Delhi pic.twitter.com/UtssadGKpU
— ANI (@ANI) November 26, 2020



