ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ದೇಶದ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ರೈತರು ನೆರೆದಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಗೃಹ ಸಚಿವ ಅಮಿತ್ ಶಾ ರೈತರ ಜೊತೆ ಮಾತುಕತೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಬುಟಾ ಸಿಂಗ್ ಮಾತನಾಡಿ ಗೃಹ ಸಚಿವ ಅಮಿತ್ ಶಾ ಅವರಿಂದ ಕರೆ ಬಂದಿದ್ದು, ರೈತ ನಾಯಕರ ಜೊತೆ ನಾಳೆ ಮಾತಿಕತೆ ನಡೆಸುವುದಾಗಿ ಹೇಳಿದ್ದಾರೆ. ಬುಟಾ ಸಿಂಗ್ ಅವರು ಸರ್ಕಾರದ ಬುರಾರಿ ಪ್ರಸ್ತಾಪದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಅಮಿತ್ ಶಾ ಅವರು ಇಂದು ಸಂಜೆ ಸಭೆಯ ಪತ್ರವನ್ನು ಕಳುಹಿಸುವುದಾಗಿ ತಿಳಿಸಿದರು.



