ನವದೆಹಲಿ : ಫೆ.15ರಿಂದ ದೇಶಾದ್ಯಂತ ಫಾಸ್ಟ್ಯಾಗ್ ಜಾರಿಗೆ ಬರಲಿದೆ. ಈ ಹಿಂದ ಕೊರೊನಾ ಸೇರಿದಂತೆ ಅನೇಕ ನ ಕಾರಣಗಳಿಂದ ಮುಂದೂಡಲ್ಪಟ್ಟಿತ್ತು. ಆದರೆ, ಈ ಬಾರಿ ದಿನಾಂಕವನ್ನು ಯಾವುದೇ ಕಾರಣಕ್ಕೂ ಮುಂದೂಡಲ್ಲ ಎಂದು ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.
ಫೆ.15ರಿಂದ ಟೋಲ್ ಗೇಟ್ ಗಳಲ್ಲಿ ಸಂಪೂರ್ಣವಾಗಿ ಫಾಸ್ಟ್ ಟ್ಯಾಗ್ ಪಾವತಿ ಕಡ್ಡಾಯ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯವಾಗಲಿದೆ ಎಂದು ಹೇಳುತ್ತಲೇ ಬಂದಿದ್ದೇವೆ ಆದರೆ ಇನ್ನು ಮುಂದೆ ದಿನಾಂಕವನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ.
2021ರ ಫೆಬ್ರವರಿ 15ರಿಂದ ದೇಶದ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಬಳಕೆ ಕಡ್ಡಾಯವಾಗಿರಬೇಕು ಎಂದು ಕೇಂದ್ರ ಸಚಿವನಿತೀನ್ ಗಡ್ಕರಿ ಆದೇಶ ಹೊರಡಿಸಿದ್ದಾರೆ.ರಾಷ್ಟ್ರೀಯ ಹದ್ದಾರಿ ಪ್ರಾಧಿಕಾರದ ಪ್ರಕಾರ, ಪ್ರಸ್ತುತ ದೇಶಾದ್ಯಂತ ಒಟ್ಟು ಶೇ. 75 ರಿಂದ 80 ರಷ್ಟು ಫಾಸ್ಟ್ಯಾಗ್ ಮೂಲಕ ಪಾವತಿಯಾಗುತ್ತಿದೆ. ಟೋಲ್ ಗೇಟ್ ಗಳಲ್ಲಿ ನಗದು ರಹಿತವಾಗುವ ಮೂಲಕ ಶೇ. 100 ರಷ್ಟು ಫಾಸ್ಟ್ಯಾಗ್ ಮೂಲಕ ಪಾವತಿಯಾಗುವಂತೆಯಾಗಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.