Connect with us

Dvgsuddi Kannada | online news portal | Kannada news online

ಉಚಿತವಾಗಿ ಆಧಾರ್ ಕಾರ್ಡ್ ಹೆಸರು, ವಿಳಾಸ, ಹುಟ್ಟಿದ ದಿನಾಂಕ ತಿದ್ದುಪಡಿಗೆ ಮಾರ್ಚ್ 14ರವರೆಗೆ ಅವಧಿ ವಿಸ್ತರಣೆ; ಆನ್ ಲೈನ್ ನಲ್ಲಿ ನೀವೇ ತಿದ್ದುಪಡಿ ಮಾಡಿಕೊಳ್ಳಬಹುದು..!

IMG 20231214 191411

ಪ್ರಮುಖ ಸುದ್ದಿ

ಉಚಿತವಾಗಿ ಆಧಾರ್ ಕಾರ್ಡ್ ಹೆಸರು, ವಿಳಾಸ, ಹುಟ್ಟಿದ ದಿನಾಂಕ ತಿದ್ದುಪಡಿಗೆ ಮಾರ್ಚ್ 14ರವರೆಗೆ ಅವಧಿ ವಿಸ್ತರಣೆ; ಆನ್ ಲೈನ್ ನಲ್ಲಿ ನೀವೇ ತಿದ್ದುಪಡಿ ಮಾಡಿಕೊಳ್ಳಬಹುದು..!

ಸರ್ಕಾರದ ಯಾವುದೇ ಯೋಜನೆಗೆ ಆಧಾರ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ಈ ಆಧಾರ್ ಕಾರ್ಡ್ ನಲ್ಲಿ ಒಂದೇ ಒಂದು ಸಣ್ಣ ತಪ್ಪು ಸರ್ಕಾರದ ಯೋಜನೆ ಕೈ ತಪ್ಪಬಹುದು. ಹೀಗಾಗಿ ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಅತ್ಯಗತ್ಯವಾಗಿದೆ. ಆಧಾರ್ ಕಾರ್ಡ್ ನ ಹೆಸರು, ವಿಳಾಸ, ಹುಟ್ಟಿದ ದಿನಾಂಕ ತಿದ್ದುಪಡಿ ಉಚಿತವಾಗಿ ನವೀಕರಿಸುವ ದಿನಾಂಕ ವಿಸ್ತರಿಸಿದೆ. ಈ ಕೆಳಗಿನ ಲಿಂಕ್ ಮೂಲಕ ನೀವೇ ಆನ್ ಲೈನ್ ನಲ್ಲಿ ತಿದ್ದುಪಡಿ ಮಾಡಬಹುದು..!

ಅಪ್​ಡೇಟ್ ಮಾಡುವ ಗಡುವನ್ನು ಡಿಸೆಂಬರ್ 14ರಿಂದ 2024ರ ಮಾರ್ಚ್ 14ರವರೆಗೆ ವಿಸ್ತರಿಸಲಾಗಿದೆ. ಈ ಗಡುವನ್ನು ವಿಸ್ತರಿಸುತ್ತಿರುವುದು ಇದು ಎರಡನೇ ಬಾರಿ. ಮೊದಲಿಗೆ ಸೆಪ್ಟೆಂಬರ್ 14ರವರೆಗೂ ಗಡುವು ಇತ್ತು. ಬಳಿಕ ಡಿಸೆಂಬರ್ 14ಕ್ಕೆ ಅದನ್ನು ಹೆಚ್ಚಿಸಲಾಗಿತ್ತು. ಜನರು ಉತ್ತಮವಾಗಿ ಸ್ಪಂದಿಸುತ್ತಿರುವ ಹಿನ್ನೆಲೆಯಲ್ಲಿ ಉಚಿತವಾಗಿ ಆಧಾರ್ ಅಪ್​ಡೇಟ್ ಮಾಡುವ ಗಡುವನ್ನು ಹೆಚ್ಚಿಸಲಾಗಿದೆ ಎಂದು ಯುಐಡಿಎಐ ಅಧಿಕೃತವಾಗಿ ತಿಳಿಸಿದೆ.

ಮಾರ್ಚ್ 14, 2024 ರವರೆಗೆ ನೀವು ಆಧಾರ್ ಕಾರ್ಡ್ನಲ್ಲಿ ಹೆಸರು, ವಿಳಾಸ ಮತ್ತು ಹುಟ್ಟಿದ ದಿನಾಂಕವನ್ನು ಉಚಿತವಾಗಿ ನವೀಕರಿಸಬಹುದು. ಇದರ ನಂತರ, ನೀವು ಸಂಸ್ಕರಣಾ ಶುಲ್ಕವಾಗಿ 50 ರೂ.ಗಳನ್ನು ಪಾವತಿಸಬೇಕಾಗಬಹುದು. ಹೀಗಾಗಿ ಕೊನೆಯ 6 ದಿನದಲ್ಲಿ ನೀವೇ ಅಪ್ಡೇಟ್ ಮಾಡಿಕೊಳ್ಳಿ…ಆಧಾರ್ ಅನ್ನು ನವೀಕರಿಸುವ ಸೌಲಭ್ಯವನ್ನು ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ದೇಶದ ನಾಗರಿಕರಿಗೆ ಉಚಿತವಾಗಿ ಒದಗಿಸುತ್ತಿದೆ. ಆನ್ಲೈನ್ ವಿಧಾನವನ್ನು ಅಳವಡಿಸಿಕೊಳ್ಳುವ ಮೂಲಕ ನೀವು ಆಧಾರ್ ಕಾರ್ಡ್ನಲ್ಲಿರುವ ಮಾಹಿತಿಯನ್ನು ನವೀಕರಿಸಬಹುದು.

ಮೈ ಆಧಾರ್ ಪೋರ್ಟಲ್ ನಲ್ಲಿ ಆಧಾರ್ ನವೀಕರಣ ಉಚಿತ: ಡಿಜಿಟಲ್ ಇಂಡಿಯಾ ಯೋಜನೆಯ ಭಾಗವಾಗಿ ಪ್ರಾರಂಭಿಸಲಾದ ಮೈ ಆಧಾರ್ ಪೋರ್ಟಲ್ ನಲ್ಲಿ ನೀವು ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ ಮತ್ತು ಹುಟ್ಟಿದ ದಿನಾಂಕವನ್ನು ಉಚಿತವಾಗಿ ನವೀಕರಿಸಬಹುದು. ಅನೇಕ ಬಾರಿ ಯುಐಡಿಎಐ ತನ್ನ ಅಧಿಕೃತ ಟ್ವಿಟರ್ ಅಂದರೆ ಎಕ್ಸ್ ಖಾತೆಯಲ್ಲಿ ಟ್ವೀಟ್ಗಳ ಮೂಲಕ ಮಾಹಿತಿಯನ್ನು ನೀಡಿದೆ.

ಯಾರು ಅಪ್ಡೇಟ್ ಮಾಡಬೇಕು? ; ಆಧಾರ್ ಕಾರ್ಡ್ ನಲ್ಲಿ ವ್ಯಕ್ತಿಯ ಬಯೋಮೆಟ್ರಿಕ್ ಡೇಟಾ, ವಿಳಾಸ, ಇಮೇಲ್, ಫೋನ್ ನಂಬರ್ ಹಾಗೂ ಇತರ ಮಾಹಿತಿಗಳಲ್ಲಿ ಯಾವುದೇ ಬದಲಾವಣೆ ಆಗಿದ್ದರೆ ಅವುಗಳನ್ನು ಆಧಾರ್ ನಲ್ಲಿ ಅಪ್ಡೇಟ್ ಮಾಡುವುದು ಅಗತ್ಯ. ಇನ್ನು ಮಗುವಿಗೆ ಆಧಾರ್ ಕಾರ್ಡ್ ಮಾಡಿಸಿದ್ದರೆ ಐದು ವರ್ಷವಾದಾಗ ಹಾಗೂ 15 ವರ್ಷವಾದಾಗ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಅಗತ್ಯ. ಇನ್ನು ಈ ಸನ್ನಿವೇಶಗಳನ್ನು ಹೊರತುಪಡಿಸಿದರೆ ಸದ್ಯ ಯುಐಡಿಎಐ ಸೂಚನೆಯಂತೆ ಆಧಾರ್ ಕಾರ್ಡ್ ಪಡೆದು 10 ವರ್ಷಗಳಾಗಿದ್ದರೆ ಅದನ್ನು ಅಪ್ಡೇಟ್ ಮಾಡುವುದು ಅಗತ್ಯ.

ಆಧಾರ್ ನಲ್ಲಿ ಮಾಹಿತಿ ಅಪ್ಡೇಟ್ ಮಾಡುವುದು ಹೇಗೆ? :

  • ಯುಐಡಿಎಐ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. https://myaadhaar.uidai.gov.in ಮೇಲೆ ಕ್ಲಿಕ್ ಮಾಡಿ.
  • ಆ ಬಳಿಕ ‘Update Aadhaar’ಆಯ್ಕೆ ಮಾಡಿ
  • ನಿಮ್ಮ ಆಧಾರ್ ಸಂಖ್ಯೆ ಹಾಗೂ ನೋಂದಾಯಿತ ಮೊಬೈಲ್ ಸಂಖ್ಯೆ ನಮೂದಿಸಿ
  • ಆ ಬಳಿಕ ‘Send OTP’ಬಟನ್ ಮೇಲೆ ಕ್ಲಿಕ್ ಮಾಡಿ
  • ಈಗ ನಿಮ್ಮ ಮೊಬೈಲ್ ಸಂಖ್ಯೆಗೆ ಬಂದಿರುವ ಒಟಿಪಿ ನಮೂದಿಸಿ
  • Login ಬಟನ್ ಮೇಲೆ ಕ್ಲಿಕ್ ಮಾಡಿ.ನಿಮಗೆ ಯಾವ ಮಾಹಿತಿಯನ್ನು ನವೀಕರಿಸಬೇಕು ಅದನ್ನು ಆಯ್ಕೆ ಮಾಡಿ. ಉದಾಹರಣೆಗೆ ವಿಳಾಸ ಬದಲಾಯಿಸಬೇಕಿದ್ದರೆ ‘Address Update’ ಆಯ್ಕೆ ಮಾಡಿ
  • ಈಗ ನಿಮ್ಮ ವಿಳಾಸ ದೃಢೀಕರಣ ದಾಖಲೆಯ ಸ್ಕ್ಯಾನ್ ಪ್ರತಿ ಅಪ್ಲೋಡ್ ಮಾಡಿ
  • ಆ ಬಳಿಕ ‘Submit’ಬಟನ್ ಮೇಲೆ ಕ್ಲಿಕ್ ಮಾಡಿ.ಈಗ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಅಪ್ಡೇಟ್ ರಿಕ್ವೆಸ್ಟ್ ಸಂಖ್ಯೆ (URN) ಬರುತ್ತದೆ
  • 15 ದಿನಗಳೊಳಗೆ ನಿಮ್ಮ ವಿಳಾಸ ಅಥವಾ ಇತರ ಯಾವುದೇ ಮಾಹಿತಿ ಆಧಾರ್ ನಲ್ಲಿ ಅಪ್ಡೇಟ್ ಆಗುತ್ತದೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top