Connect with us

Dvgsuddi Kannada | online news portal | Kannada news online

ನವೆಂಬರ್ 30ರ ನಂತರ  ಉಚಿತ ಪಡಿತರ ಅಕ್ಕಿ ವಿತರಣೆ ವಿಸ್ತರಣೆ ಇಲ್ಲ

bpl card raice

ಪ್ರಮುಖ ಸುದ್ದಿ

ನವೆಂಬರ್ 30ರ ನಂತರ  ಉಚಿತ ಪಡಿತರ ಅಕ್ಕಿ ವಿತರಣೆ ವಿಸ್ತರಣೆ ಇಲ್ಲ

ನವದೆಹಲಿ: ಕೋವಿಡ್ ಹಿನ್ನೆಲೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ (PMGKAY) ಉಚಿತ ಪಡಿತರ ಅಕ್ಕಿ ವಿತರಿಸಲಾಗುತ್ತಿತ್ತು. ಇದೀಗ ನವೆಂಬರ್ 30 ರ ನಂತರ ಉಚಿತ ಅಕ್ಕಿ ವಿತರಣೆ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಆಹಾರ ಮತ್ತು ಸಾರ್ವಜನಿಕ ವಿತರಣ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದ ಆರ್ಥಿಕತೆ ಪುನರುಜ್ಜೀವನದ ಹಂತದಲ್ಲಿರುವ ಕಾರಣ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ವಿಸ್ತರಿಸುವ ಯಾವುದೇ ಪ್ರಸ್ತಾಪವಿಲ್ಲ. ಕೊರೊನಾ  ಸಂಕಷ್ಟದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ವ್ಯಾಪ್ತಿಯಲ್ಲಿ ದೇಶದ 80 ಕೋಟಿ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಉಚಿತವಾಗಿ ಪಡಿತರ ವಿತರಿಸಲಾಗುತ್ತಿದೆ. ಆರ್ಥಿಕತೆಯಲ್ಲಿ ಚೇತರಿಕೆ ಕಂಡಿದೆ. ಹೀಗಾಗಿ ನವೆಂಬರ್  30ರ ನಂತರ ಉಚಿತ ಪಡಿತರವನ್ನು ವಿಸ್ತರಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದ್ದಾರೆ.

ಆರ್ಥಿಕತೆಯಲ್ಲಿ ಚೇತರಿಕೆ ಮತ್ತು ಒಎಂಎಸ್‌ಎಸ್ ನೀತಿಯಡಿಯಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳ ಉತ್ತಮ ವಿಲೇವಾರಿ ದೃಷ್ಟಿಯಿಂದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ(ಪಿಎಂಜಿಕೆಎವೈ) ಮೂಲಕ ಉಚಿತ ಪಡಿತರ ವಿತರಣೆಯನ್ನು ನವೆಂಬರ್ 30 ರ ನಂತರ ವಿಸ್ತರಿಸುವ ಯಾವುದೇ ಪ್ರಸ್ತಾವನೆಯನ್ನು ಕೇಂದ್ರ ಹೊಂದಿಲ್ಲ.  PMGKAY ಅನ್ನು ಮಾರ್ಚ್ 2020 ರಲ್ಲಿ ಘೋಷಿಸಲಾಯಿತು. ನಂತರ ಏಪ್ರಿಲ್-ಜೂನ್ 2021 ಅವಧಿಗೆ ಪ್ರಾರಂಭಿಸಲಾಗಿತ್ತು. ಆದರೆ ನಂತರ ಅದನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top