Connect with us

Dvgsuddi Kannada | online news portal | Kannada news online

ಅಡುಗೆ ಅನಿಲ, ಡೀಸೆಲ್, ಪೆಟ್ರೋಲ್ ದರ ಇಳಿಕೆ ಬಗ್ಗೆ ಸಿಹಿ ಸುದ್ದಿ ನೀಡಿದ ಸಚಿವ ಧರ್ಮೇಂದ್ರ ಪ್ರಧಾನ್

ರಾಷ್ಟ್ರ ಸುದ್ದಿ

ಅಡುಗೆ ಅನಿಲ, ಡೀಸೆಲ್, ಪೆಟ್ರೋಲ್ ದರ ಇಳಿಕೆ ಬಗ್ಗೆ ಸಿಹಿ ಸುದ್ದಿ ನೀಡಿದ ಸಚಿವ ಧರ್ಮೇಂದ್ರ ಪ್ರಧಾನ್

ನವದೆಹಲಿ: ಅಡುಗೆ ಅನಿಲ, ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ಮಾರ್ಚ್ ಅಥವಾ ಏಪ್ರಿಲ್ ವೇಳೆಗೆ ಕಡಿಮೆಯಾಗಲಿವೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ತೈಲ ಉತ್ಪಾದಿಸುವ ದೇಶಗಳಾದ ರಷ್ಯಾ, ಕತಾರ್, ಕುವೈತ್ ಗಳ ಮೇಲೆ ಉತ್ಪಾದನೆ ಹೆಚ್ಚಳ ಮಾಡುವಂತೆ ಭಾರತ ಒತ್ತಡ ಹೇರುತ್ತಿದೆ. ಬ್ಯಾರೆಲ್ ಗೆ ವೆಚ್ಚ ಕಡಿಮೆಯಾಗಲಿದ್ದು, ಇದರಿಂದ ಚಿಲ್ಲರೆ ಇಂಧನ ಬೆಲೆ ಕೂಡ ಕುಸಿಯಲಿದೆ ಎಂದು ಹೇಳಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಬೇಡಿಕೆಯಲ್ಲಿ ಕುಸಿತವಾದ ಕಾರಣ ಕಳೆದ ವರ್ಷ ಏಪ್ರಿಲ್ ನಲ್ಲಿ ಪ್ರಮುಖ ತೈಲ ಉತ್ಪಾದಕ ರಾಷ್ಟ್ರಗಳು ಉತ್ಪಾದನೆಯನ್ನು ಕಡಿತಗೊಳಿಸಲು ನಿರ್ಧರಿಸಿದ್ದವು. ಇದರಿಂದಾಗಿ ಬೇಡಿಕೆ ಹೆಚ್ಚಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಲು ಕಾರಣವಾಗಿದೆ ಎಂದು ಅವರು ವಾರಣಾಸಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಪ್ರಮುಖ ತೈಲ ಉತ್ಪಾದಕ ರಾಷ್ಟ್ರಗಳೊಂದಿಗೆ ಸಂಪರ್ಕದಲ್ಲಿದ್ದು, ಬೆಲೆ ಇಳಿಕೆ ಸಲುವಾಗಿ ಉತ್ಪಾದನೆ ಹೆಚ್ಚಳಕ್ಕೆ ಒತ್ತಡ ಹೇರಲಾಗಿದೆ. ಡೀಸೆಲ್-ಪೆಟ್ರೋಲ್ ಮತ್ತು ಅನಿಲ ಬೆಲೆ ಯಾವಾಗ ಇಳಿಕೆಯಾಗುತ್ತದೆ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆದರೆ, ಮಾರ್ಚ್ ಅಥವಾ ಏಪ್ರಿಲ್ ವೇಳೆಗೆ ಬೆಲೆ ಇಳಿಕೆಯಾಗಲಿದೆ ಎಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top