ನವದೆಹಲಿ; ಭಾರತ-ಪಾಕಿಸ್ತಾನ ಯುದ್ಧ ಭೀತಿ ನಡುವೆ ಕದನ ವಿರಾಮಕ್ಕೆ ಎರಡು ರಾಷ್ಟ್ರಗಳು ಒಪ್ಪಿಗೆ ಸೂಚಿಸಿವೆ. ಉಭಯ ದೇಶಗಳ ನಡುವಿನ ನೇರ ಮಾತುಕತೆಯಂತೆ ಶನಿವಾರ(ಮೇ 10) ಸಂಜೆ 5ಗಂಟೆಯಿಂದ ಕದನ ವಿರಾಮಕ್ಕೆ ಸಮ್ಮತಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಮೇ 12ರಂದು ಮಾತುಕತೆ
ಕದನ ವಿರಾಮ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವೆ ಮಾತುಕತೆ ನಡೆಯಲಿದೆ ಎಂದು ಭಾರತ ತಿಳಿಸಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಟ್ವಿಟ್ ಮಾಡುವ ಮೂಲಕ ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ತಿಳಿಸಿದ್ದಾರೆ.
ಭಾರತೀಯ ಡಿಜಿಎಂಒಗೆ ಕರೆ ಮಾಡಿದ್ದ ಪಾಕ್ ಅಧಿಕಾರಿಗಳು ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದು, ಅದರಂತೆ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿರುವುದಾಗಿ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 3.30ಕ್ಕೆ ಪಾಕಿಸ್ತಾನದ ಅಧಿಕಾರಿಗಳು ಡೈರೆಕ್ಟರ್ ಜನರಲ್ ಆಫ್ ಮಿಲಿಟರಿ ಆಪರೇಷನ್ ಗೆ ಕರೆ ಮಾಡಿ, ಕದನ ವಿರಾಮಕ್ಕೆ ಮನವಿ ಮಾಡಿದ್ದರು. ಅದರಂತೆ ಇಂದು ಸಂಜೆ 5ಗಂಟೆಯಿಂದ ಭೂ, ವೈಮಾನಿಕ, ನೌಕಾ ದಾಳಿಯನ್ನು ಸ್ಥಗಿತಗೊಳಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಳ್ಳಲಾಗಿದೆ ಎಂದು ವಿಕ್ರಮ್ ಮಿಸ್ರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯ ಅಪರೇಷನ್ ಸಿಂದೂರ ನಡೆಸಿ ಉಗ್ರಹ ಅಡಗುತಾಣಗಳ ಮೇಲೆ ದಾಳಿ ನಡೆಸಿತ್ತು. ಪಾಕಿಸ್ತಾನ ಭಾರತೀಯ ನಾಗರಿಕರ ದಾಳಿ ಪ್ರಯತ್ನ ನಡೆಸಿದರೂ ಭಾರತ, ಪಾಕಿಸ್ತಾನದ ದಾಳಿಯನ್ನು ಹಿಮ್ಮೆಟ್ಟಿಸಿ ಪ್ರತಿ ದಾಳಿ ನಡೆಸಿತ್ತು. ಭಾರತ ದಾಳಿಗೆ ತತ್ತರಿಸಿದ ಪಾಕಿಸ್ತಾನ ಕದನವಿರಾಮಕ್ಕಾಗಿ ಭಾರತದ ಜತೆ ಗೋಗರೆದಿದ್ದು, ಅದರಂತೆ
ಸೇನಾ ಕಾರ್ಯಾಚರಣೆ ಸ್ಥಗಿತ
ಉಭಯ ದೇಶಗಳ ನಡುವೆ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.ಆದರೆ, ಭಯೋತ್ಪಾದನೆಯ ವಿರುದ್ಧದ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.



