ಪಾಕಿಸ್ತಾನ ವಿರುದ್ಧ ಆಪರೇಷನ್ ಸಿಂಧೂರ್; 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ; ಉಗ್ರರು ಉಡೀಸ್..!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ನವದೆಹಲಿ :ಪಾಕಿಸ್ತಾನದ ಉಗ್ರರು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಹೆಸರಲ್ಲಿ ರಾತ್ರಿ 1.30ರ ವೇಳೆಗೆ‌ ನಿಖರ ದಾಳಿ ಮಾಡಿದೆ. ಈ ಕಾರ್ಯಾಚರಣೆಯಡಿಯಲ್ಲಿ, ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ನಲ್ಲಿರುವ 9 ಭಯೋತ್ಪಾದಕ ಅಡಗುತಾಣಗಳನ್ನು ಉಡೀಸ್ ಮಾಡಿದೆ.

9 ಸ್ಥಳಗಳ ಧ್ವಂಸ

ಸದ್ಯದ ಮಾಹಿತಿ ಪ್ರಕಾರ ದಾಳಿಗಳಲ್ಲಿ ಸುಮಾರು 100 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. 50 ಕ್ಕೂಮಂದಿ ಗಾಯಗೊಂಡಿದ್ದಾರೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ, ರಫೇಲ್ ಯುದ್ಧ ವಿಮಾನವನ್ನು ಬಳಸಿ ದಾಳಿ ನಡೆದಿದೆ. ಪಾಕಿಸ್ತಾನದ ಮುರಿಡ್ಕೆ, ಕೋಟ್ಲಿ, ಮುಜಫರಾಬಾದ್ ಮತ್ತು ಬಹವಾಲ್ಪುರ್ ಸೇರಿದಂತೆ 9 ಸ್ಥಳಗಳ ಮೇಲೆ ಕ್ಷಿಪಣಿಗಳನ್ನು ಹಾರಿಸಿ ಭಯೋತ್ಪಾದಕರ ಅಡಗುತಾಣಗಳನ್ನು ಧ್ವಂಸ‌ ಮಾಡಲಾಗಿದೆ.

ಭಾರತದ ಮೇಲೆ ಭಯೋತ್ಪಾದಕ ದಾಳಿ ಕಾರ್ಯಗತಗೊಳಿಸಲು ಯೋಜನೆ ರೂಪಿಸಿದ್ದ ಸ್ಥಳಗಳು ಇವು ಎಂದು ಗುತಿಸಿ ನೇರೆ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಸ್ಥಳೀಯ ವರದಿಗಳ ಪ್ರಕಾರ, ಬಹಾವಲ್ಪುರದಲ್ಲಿ ನಡೆದ ವಾಯುದಾಳಿಯ ನಂತರ 30 ಜನರು ಸಾವನ್ನಪ್ಪಿದ್ದಾರೆ. ಲಷ್ಕರ್ ಎ ತೊಯ್ಬಾ ಮತ್ತು ಜೈಶ್‌ ಎ ಮೊಹಮ್ಮದ್ ಉಗ್ರ ಸಂಘಟನೆಗಳನ್ನು ಪ್ರಧಾನ ಕಚೇರಿಗಳು ನಾಶವಾಗಿವೆ. ಪಾಕಿಸ್ತಾನದ ಅಂತರ ಸೇವೆಗಳ ಸಾರ್ವಜನಿಕ ಸಂಪರ್ಕ (ISPR) ನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಭಾರತ 24 ಕ್ಷಿಪಣಿಗಳನ್ನು ಹಾರಿಸಿದೆ ಎಂದು ಹೇಳಿದರು.

ದಾಳಿಯ ನಂತರ, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರು ಅಮೆರಿಕದ ಎನ್‌ಎಸ್‌ಎ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರನ್ನು ಸಂಪರ್ಕಿಸಿ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದರು. ದಾಳಿಯ ವರದಿಗಳು ತಮಗೆ ಬಂದಿವೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರರು ಎಎನ್‌ಐಗೆ ತಿಳಿಸಿದ್ದಾರೆ. ಈ ದಾಳಿಯ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣವಿದೆ.

ಕೊಟ್ಲಿ, ಬಹವಾಲ್ಪುರ್, ಮುಜಾಫರ್ ಬಾದ್, ಗುಲ್ಫರ್, ಭೀಂಬರ್, ಬಾಘ್, ಸಿಯಾಲ್ ಕೋಟ್, ಮುರಿದ್ಕೆ, ಚಕಾಮ್ರ ಮೇಲೆ ದಾಳಿ ನಡೆಸಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ರಾತ್ರಿ 1.30 ಕ್ಕೆ ಭಾರತೀಯ ಸೇನೆ ದಾಳಿ ನಡೆಸಿದೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುಮಾರು ಎರಡು ವಾರಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ, ಇದರಲ್ಲಿ ಪಾಕಿಸ್ತಾನಿ ಉಗ್ರರು ಪ್ರವಾಸಿ ತಾಣವೊಂದರಲ್ಲಿ 26 ನಾಗರಿಕರನ್ನು ಗುಂಡಿಕ್ಕಿ ಕೊಂದರು. ಈ ದಾಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಲು ಭಾರತ ತನ್ನ ಬದ್ಧತೆಯನ್ನು ವ್ಯಕ್ತಪಡಿಸಿದೆ.

ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ

ಭಾರತದ ಸೇನೆ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ತುರ್ತು ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಬಂದ್ ಮಾಡಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *