Connect with us

Dvgsuddi Kannada | online news portal | Kannada news online

ಗುಪ್ತಚರ ಇಲಾಖೆ‌ಯಲ್ಲಿ ಖಾಲಿ ಇರುವ 995 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು ಕೊನೆ 2 ದಿನ ಅವಕಾಶ

images 39

ಪ್ರಮುಖ ಸುದ್ದಿ

ಗುಪ್ತಚರ ಇಲಾಖೆ‌ಯಲ್ಲಿ ಖಾಲಿ ಇರುವ 995 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು ಕೊನೆ 2 ದಿನ ಅವಕಾಶ

ನವದೆಹಲಿ: ಕೇಂದ್ರ ಗುಪ್ತಚರ ಇಲಾಖೆಯಲ್ಲಿ (ಐಬಿ) ಖಾಲಿ ಇರುವ 995 ಹುದ್ದೆಗಳಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಗ್ರೇಡ್​ 2 ಹುದ್ದೆಗಳಾಗುದ್ದು, ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, mha.gov.in ಅಥವಾ nsc.gov.in ಭೇಟಿ ನೀಡಿ ಪರಿಶೀಲನೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಡಿಸೆಂಬರ್​ 15 ಕಡೆಯ ದಿನವಾಗಿದೆ.

ಹುದ್ದೆ ವಿವರ: ಕೇಂದ್ರ ಗುಪ್ತಚರ ಇಲಾಖೆಯಲ್ಲಿ 995 ಅಸಿಸ್ಟಂಟ್​ ಸೆಂಟ್ರಲ್​ ಇಂಟಲಿಜೆನ್ಸ್​​ ಆಫೀಸರ್ (ಎಸಿಐಒ) ಗ್ರೇಡ್​ 2/ ಎಕ್ಸಿಕ್ಯೂಟಿವ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿಯನ್ನು ಹೊಂದಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷಗಳನ್ನು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.ವೇತನ: ಈ ಹುದ್ದೆಗೆ 44,900-1,42,400 ರೂ. ಮಾನಸಿಕ ವೇತನ ನಿಗದಿ ಮಾಡಲಾಗಿದೆ. ನೇಮಕಾತಿ ಪ್ರಕ್ರಿಯೆ ಶುಲ್ಕ 450 ರೂ. ಅನ್ನು ಎಲ್ಲ ಅಭ್ಯರ್ಥಿಗಳು ಭರಿಸಬೇಕಿದೆ. ಇನ್ನು ಪರೀಕ್ಷೆ ವೆಚ್ಚ 100 ರೂ. ಆಗಿದೆ. ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಓದಿದ ನಂತರ ಅರ್ಜಿ ಸಲ್ಲಿಸಬೇಕು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ ಮತ್ತು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುವುದು. ರಾಜ್ಯದ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಈ ಕೇಂದ್ರದಲ್ಲಿ ಈ ಹುದ್ದೆಗೆ ಪರೀಕ್ಷೆ ನಡೆಯಲಿದೆ.

ಈ ಹುದ್ದೆಗೆ ನವೆಂಬರ್​ 25 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​ 15 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಡಿಸೆಂಬರ್​ 19 ಕಡೆಯ ದಿನವಾಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ mha.gov.in ಅಥವಾ nsc.gov.in ಇಲ್ಲಿಗೆ ಭೇಟಿ ನೀಡಬಹುದು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top