Connect with us

Dvgsuddi Kannada | online news portal | Kannada news online

ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ; ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ಸ್) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು 2024 ರ ಜೂನ್ ನಲ್ಲಿ ಆಯೋಜಿಸಿದೆ.

ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್ ಮೂಲಕ www.ssckkr.kar.nic.in & https://ssc.gov.in ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 18 ಕೊನೆಯ ದಿನವಾಗಿರುತ್ತದೆ.

ವಯೋಮಿತಿ 2024 ರ ಆಗಸ್ಟ್ 1 ಕ್ಕೆ ಸಾಮಾನ್ಯ ವರ್ಗ 30 ವರ್ಷ, ಎಸ್‍ಸಿ, ಎಸ್‍ಟಿ, ಈಎಸ್‍ಎಂ, ಓಬಿಸಿ, ಪಿಡಬ್ಲ್ಯೂಡಿ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-2527342,25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ ದೂ.ಸಂ:08192-259446 ಇಲ್ಲಿಗೆ ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ರವೀಂದ್ರ.ಡಿ.ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top