ನವದೆಹಲಿ: ಮಾರ್ಚ್ 28ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಹಿಜಾಬ್ ಪ್ರಕರಣ ಕುರಿತ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ನಲ್ಲಿ ಕೋರಲಾಗಿತ್ತು. ಆದರೆ, ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಿಸಿದೆ.
ವಿದ್ಯಾರ್ಥಿನಿ ಪರ ವಕೀಲ ದೇವದತ್ತ ಕಾಮತ್, ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕೊಡುವುದಿಲ್ಲ. ವಿದ್ಯಾರ್ಥಿನಿಯರು ಶೈಕ್ಷಣಿಕ ವರ್ಷ ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ತುರ್ತಾಗಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಬೇಕು ಎಂದು ಕೋರಿದ್ದರು. ಈ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಸಿಜೆಐ ಎನ್. ವಿ ರಮಣ, ಹಿಜಾಬ್‌ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ ಎಂದು ನುಡಿದಿದ್ದಾರೆ.



