ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ 13 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ಬೆಳಗಾವಿ ನಗರದ ಮಾಲಿನಿ ಸಿಟಿ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯುತ್ತಿದ್ದು, ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಹಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೇರವಾಗಿ ಫಲಾನುಭವಿಗಳ ಖಾತೆಗೆ ನೇರವಾಗಿ ಬಿಡುಗಡೆ/ವರ್ಗಾವಣೆ ಮಾಡಿದ್ದಾರೆ.ದೇಶದ ಒಟ್ಟು 8 ಕೋಟಿ ರೈತರ ಖಾತೆಗೆ ತಲಾ 2 ಸಾವಿರದಂತೆ 16 ಸಾವಿರ ಕೋಟಿ ರೂಪಾಯಿ. ಇದರಲ್ಲಿ ಕರ್ನಾಟಕ ರಾಜ್ಯದ 49.55 ರೈತರಿಗೆ 991 ಕೋಟಿ ರೂಪಾಯಿಗಳನ್ನು ಪ್ರಧಾನಮಂತ್ರಿಗಳು ವರ್ಗಾವಣೆ ಮಾಡಿದ್ದಾರೆ.



