Connect with us

Dvgsuddi Kannada | online news portal | Kannada news online

ಗೃಹ ಬಳಕೆ ಸಿಲಿಂಡರ್ ಗೆ 200 ರೂ. ಸಬ್ಸಿಡಿ ನೀಡಲು ಕೇಂದ್ರ ಸರ್ಕಾರ ಸಿದ್ಧತೆ..!

gas

ಪ್ರಮುಖ ಸುದ್ದಿ

ಗೃಹ ಬಳಕೆ ಸಿಲಿಂಡರ್ ಗೆ 200 ರೂ. ಸಬ್ಸಿಡಿ ನೀಡಲು ಕೇಂದ್ರ ಸರ್ಕಾರ ಸಿದ್ಧತೆ..!

ನವದೆಹಲಿ: ಗೃಹ ಬಳಕೆಯ ಎಲ್ಲಾ ಅಡುಗೆ ಅನಿಲ ಸಿಲಿಂಡರ್ (ಎಲ್‌ಪಿಜಿ ) ಬೆಲೆಯಲ್ಲಿ 200 ರೂ.ವರೆಗೆ ಕಡಿತಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಸರ್ಕಾರದ ಈ ನಿರ್ದಾರದಿಂದ ಉಜ್ವಲ ಯೋಜನೆಯಡಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಹೆಚ್ಚುವರಿ 200 ರೂ. ಸಬ್ಸಿಡಿಯಿಂದ ಒಟ್ಟು 400 ರೂ.ಸಬ್ಸಿಡಿ ಸಿಗುವಂತಾಗಲಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಧಾನಿ ಮೋದಿ ಅವರು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ₹ 200 ಕಡಿತವನ್ನು ನಿರ್ಧರಿಸಿದ್ದಾರೆ. ಇದು ರಕ್ಷಾ ಬಂಧನ ಮತ್ತು ಓಣಂ ಸಂದರ್ಭದಲ್ಲಿ ದೇಶದ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡುತ್ತಿರುವ ಉಡುಗೊರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಪೆಟ್ರೋಲಿಯಂ ಕಂಪನಿಗಳು 14 ಕೆಜಿ ಗೃಹೋಪಯೋಗಿ ಮತ್ತು 19 ಕೆಜಿ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ತಿಂಗಳ ಮೊದಲನೆಯ ದಿನ ನಿಗದಿಪಡಿಸುತ್ತವೆ.ಆಗಸ್ಟ್ ಒಂದರಂದು ಪೆಟ್ರೋಲಿಯಂ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್​​​ಗಳ ಬೆಲೆಯನ್ನು 100 ರೂ.ಕಡಿತಗೊಳಿಸಿದ್ದವು, ಆದರೆ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ.

ಪ್ರಸ್ತುತ ರಾಜಧಾನಿ ದೆಹಲಿಯಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 1103 ರೂ, ಮುಂಬೈನಲ್ಲಿ 1102.50, ಕೋಲ್ಕತ್ತಾದಲ್ಲಿ 1129 ಮತ್ತು ಚೆನ್ನೈನಲ್ಲಿ 1118.50 ರೂ. ಪೆಟ್ರೋಲಿಯಂ ಕಂಪನಿಗಳು ಪ್ರತಿ ತಿಂಗಳ ಮೊದಲನೇ ತಾರೀಖಿನಂದು ಎಲ್‌ಪಿಜಿ ಬೆಲೆಯನ್ನು ಬದಲಾಯಿಸುತ್ತವೆ. 200 ಇಳಿಕೆಯಾದರೆ, ರಾಜಧಾನಿ ದೆಹಲಿಯಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 903 ರೂ. ಆಗುತ್ತದೆ. ಸಬ್ಸಿಡಿ ಪಡೆಯಲು ನಿಮ್ಮ ಆಧಾರ್ ಸಂಖ್ಯೆಯನ್ನು ಎಲ್‌ಪಿಜಿ ಸಂಪರ್ಕದೊಂದಿಗೆ ಲಿಂಕ್ ಮಾಡಬೇಕು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top