ನವದೆಹಲಿ: ಫೆಬ್ರವರಿ ತಿಂಗಳಲ್ಲಿ ಮೂರನೇ ಬಾರಿಗೆ ಅಡುಗೆ ಅನಿಲ ದರ ಏರಿಕೆಯಾಗಿದ್ದ LPG ಬೆಲೆ, ಇಂದು ತಿಂಗಳ ಆರಂಭದಲ್ಲೇ ಮತ್ತೊಮ್ಮೆ ಎಲ್ ಪಿ ಜಿ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಪರಿಷ್ಕೃತ ದರ ಪಟ್ಟಿ ಪ್ರಕಟವಾಗಿದ್ದು, ಮಾರ್ಚ್ 1ರಂದು ಗೃಹಬಳಕೆ ಎಲ್ ಪಿ ಜಿ ಸಿಲಿಂಡರ್ ಬೆಲೆ 25 ರು ಏರಿಕೆ ಮಾಡಲಾಗಿದೆ.
ಒಂದು ತಿಂಗಳ ಅಂತರದಲ್ಲಿ ನಾಲ್ಕು ಬಾರಿ ದರ ಏರಿಕಯಾಗಿದೆ. ನಾಲ್ಕು ದಿನಗಳ ಹಿಂದೆ ಎಲ್ ಪಿ ಜಿ ಸಿಲಿಂಡರ್ ದರ ಪರಿಷ್ಕರಿಸಲಾಗಿದೆ. ಮೂರು ದಿನಗಳ ಹಿಂದೆ ಗೃಹಬಳಕೆಯ ಸಿಲಿಂಡರ್ ಬೆಲೆ 25 ರು ಏರಿಕೆಯಾಗಿತ್ತು. ಫೆಬ್ರವರಿ ತಿಂಗಳಲ್ಲಿ 100 ರು ಏರಿಕೆ ಮಾಡಲಾಗಿತ್ತು. ಫೆಬ್ರವರಿ 4, ಫೆ.14 ಹಾಗೂ ಫೆ.25ರಂದು ಎಲ್ ಪಿಜಿ ಸಿಲಿಂಡರ್ ದರ ಏರಿಕೆ ಮಾಡಲಾಗಿತ್ತು. ಡಿಸೆಂಬರ್ ತಿಂಗಳಿನಿಂದ 200 ರು ಪ್ರತಿ ಸಿಲಿಂಡರ್ ನಂತೆ ಏರಿಕೆ ಕಾಣಲಾಗಿದೆ.
ಮಾರ್ಚ್ 1ರಂದು ಬೆಲೆ ಏರಿಕೆ ನಂತರ ದೆಹಲಿಯಲ್ಲಿ 14.2 ಕೆ.ಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ 794 ರೂಪಾಯಿಂದ 819ರೂಪಾಯಿಗೆ ಏರಿಕೆಯಾಗಿದೆ. ಇಂದಿನಿಂದ ವಿವಿಧ ನಗರದಲ್ಲಿ ಬೆಲೆಗಳು ದೆಹಲಿ 819, ಬೆಂಗಳೂರು: 822, ಮುಂಬೈ: 819, ಕೋಲ್ಕತಾ: 845.50 , ಚೆನ್ನೈ: 835,
ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ.
ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ. ಇದಲ್ಲದೆ ಆರು ತಿಂಗಳಿಗೊಮ್ಮೆ ನೈಸರ್ಗಿಕ ಅನಿಲದ ಸರಾಸರಿ ದರ ನಿಗದಿಪಡಿಸಲಾಗುತ್ತದೆ. ಈ ಹೊಸ ದರಗಳು ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಕಂಪನಿ ಹೇಳಿದೆ.



