ಇಂದೋರ್: ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ಬಸ್ ಕಾಲುವೆಗೆ ಉರುಳಿದ ದುರಂತದಲ್ಲಿ ಮೃತಪಟ್ಟ 37 ಜನರ ಶವವನ್ನು ಕಾಲುವೆಯಿಂದ ಹೊರಕ್ಕೆ ತೆಗೆಯಲಾಗಿದೆ. ಘಟನೆಯಲ್ಲಿ 38 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ಸುಮಾರು 57 ಪ್ರಯಾಣಿಕರನ್ನು ಬಸ್, ತುಂಬಿ ಹರಿಯುತ್ತಿದ್ದ ಕಾಲುವೆಯೊಂದಕ್ಕೆ ಉರುಳಿ ಬಿದ್ದಿರುವ ಘಟನ ಇಂದು ಬೆಳಿಗ್ಗೆ ನಡೆದಿತ್ತು. ಈ ಸರ್ಕಾರಿ ಬಸ್ ಸಿದ್ದಿಯಿಂದ ಸತ್ನಾ ಕಡೆ ಹೊರಟಿತ್ತು. ಸಿದ್ದಿ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಕಾಲುವೆಗೆ ಉರುಳಿ ಬಿದ್ದಿತ್ತು. ಘಟನೆಯಲ್ಲಿ 38 ಜನ ಮೃತಪಟ್ಟಿದ್ದು, 15 ಜನರನ್ನು ರಕ್ಷಿಸಲಾಗಿದೆ. ಉಳಿದವರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಘಟನೆ ಕುರಿತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ಅವರು, ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಸಿದ್ದಿ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಸ್ಥಳದಲ್ಲಿ ಸಾವು ನೋವು ಹೆಚ್ಚಾಗುವ ಸಂಭವವಿದ್ದು, ಪರಿಹಾರ ಕಾರ್ಯಾಚರಣೆ ಚುರುಕುಗೊಂಡಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.